ಕನ್ನಡಪ್ರಭ ವಾರ್ತೆ ಮಂಗಳೂರು
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಹತೋಭಾರ ಮಂಗಳಾದೇವಿ ದೇವಸ್ಥಾನ, ಉರ್ವ ಶ್ರೀ ಮಹಾಗಣಪತಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ, ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ದಾರಿಯುದ್ಧಕ್ಕೂ ಸ್ಥಳೀಯ ಕಾರ್ಯಕರ್ತರು ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ ಜಯಕಾರ ಹಾಕುವ ಮೂಲಕ ಬರಮಾಡಿಕೊಂಡರು.ಇದೇ ಸಂದರ್ಭ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಇದ್ದರು.