ಚೆಸ್‌ನಿಂದ ತಾಳ್ಮೆ, ಬುದ್ಧಿವಂತಿಕೆ ವೃದ್ಧಿ: ಕ್ಯಾ.ಚೌಟ

KannadaprabhaNewsNetwork |  
Published : Aug 06, 2026, 03:00 AM IST
ರಾಷ್ಟ್ರೀಯ ಫಿಡೆ ರೇಟೆಡ್‌ ಚಾಂಪಿಯನ್‌ಶಿಪ್‌ಗೆ ಚಾಲನೆ ನೀಡಲಾಯಿತು | Kannada Prabha

ಸಾರಾಂಶ

ಚೆಸ್ ಕೇವಲ ಆಟವಲ್ಲ, ಅದು ತಾಳ್ಮೆ, ದೂರದೃಷ್ಟಿ, ಬುದ್ಧಿವಂತಿಕೆ, ಜ್ಞಾನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ಮಂಗಳೂರು: ಚೆಸ್ ಕೇವಲ ಆಟವಲ್ಲ, ಅದು ತಾಳ್ಮೆ, ದೂರದೃಷ್ಟಿ, ಬುದ್ಧಿವಂತಿಕೆ, ಜ್ಞಾನ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ (ಡಿಕೆಸಿಎ), ಅಖಿಲ ಭಾರತ ಚೆಸ್ ಫೆಡರೇಷನ್ (ಎಐಸಿಎಫ್) ಹಾಗೂ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ (ಕೆಎಸ್‌ಸಿಎ) ಆಶ್ರಯದಲ್ಲಿ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ನವಮಂಗಳೂರು ಬಂದರು ಪ್ರಾಧಿಕಾರ ಪ್ರಾಯೋಜಿತ 39ನೇ ರಾಷ್ಟ್ರೀಯ ಅಂಡರ್-11 ಓಪನ್ ಮತ್ತು ಬಾಲಕಿಯರ ಫಿಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್-2026 ಉದ್ಘಾಟಿಸಿ ಅವರು ಮಾತನಾಡಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾತನಾಡಿ, ಚೆಸ್ ಬುದ್ಧಿವಂತಿಕೆ, ಏಕಾಗ್ರತೆ, ತಾಳ್ಮೆ, ದೂರದೃಷ್ಟಿ ಹಾಗೂ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಬೆಳೆಸುವ ಅದ್ಭುತ ಕ್ರೀಡೆ ಎಂದರು.

ರಾಜ್ಯ ಚೆಸ್ ಅಸೋಸಿಯೇಷನ್ ಅಧ್ಯಕ್ಷ ಮಧುಕರ್ ಟಿ.ಎನ್., ಶಾಸಕ ವೇದವ್ಯಾಸ ಕಾಮತ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ., ರಾಷ್ಟ್ರೀಯ ಚೆಸ್ ಅಸೋಸಿಯೇಷನ್‌ನ ಭವೇಶ್ ಪಟೇಲ್, ರಾಜ್ಯ ಚೆಸ್ ಅಸೋಸಿಯೇಷನ್ ಕಾರ್ಯದರ್ಶಿ ಗ್ರಾಂಡ್ ಮಾಸ್ಟರ್ ತೇಜಕುಮಾರ್ ಎಂ.ಎಸ್., ನೀವಿಯಸ್ ಸೊಲ್ಯೂಷನ್ಸ್ ಸಂಸ್ಥೆಯ ನಿರ್ದೇಶಕ ಅಜಯ್ ಪ್ರಭು, ಎನ್ಎಂಪಿಸಿ ಅಧಿಕಾರಿ ಪ್ರದೀಪ್, ಎಂಆರ್‌ಪಿಎಲ್‌ನ ಅಧಿಕಾರಿ ಸಂದೇಶ್ ಕುರ್ಟೋ, ದ.ಕ. ಜಿಲ್ಲಾ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನಿಲ್ ಆಚಾರ್, ಕಾರ್ಯದರ್ಶಿ ರಮ್ಯಾ ಎಸ್.ರೈ. ಮತ್ತಿತರರು ಇದ್ದರು.

ದ.ಕ. ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ್ ಸ್ವಾಗತಿಸಿದರು. ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ ವಂದಿಸಿದರು. ಲವಿತಾ ನಿರೂಪಿಸಿದರು.

29 ರಾಜ್ಯಗಳಿಂದ 644 ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಆ. 8ರ ತನಕ ಪಂದ್ಯಾವಳಿ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಡಿಪಿಒ ಹುದ್ದೆಗೆ ಇಬ್ಬರ ಕಾದಾಟ!
ಪತ್ರಕರ್ತರು ಜನಸಾಮಾನ್ಯರ ಧ್ವನಿ