ವಿವಾದಿತ ಭೂಮಿ ಕೈಬಿಟ್ಟು ಪರಿಷ್ಕೃತ ಯೋಜನೆ ರೂಪಿಸಲು ಕೆಐಎಡಿಬಿಗೆ ಸೂಚಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ

KannadaprabhaNewsNetwork |  
Published : Jan 25, 2025, 01:00 AM IST
ಸಂಸದ ಕ್ಯಾ.ಬ್ರಿಜೇಶ್‌ ಚೌಟ  | Kannada Prabha

ಸಾರಾಂಶ

ಗಂಜಿಮಠದಲ್ಲಿ 104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಕಷ್ಟು ವಿಳಂಬವಾಗಿದೆ ಎಂದು ಕ್ಯಾ. ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್‌ಗೆ ಪತ್ರ ಬರೆದಿದ್ದಾರೆ. ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ ಶೀಘ್ರ ಅದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಗಂಜಿಮಠದಲ್ಲಿ 104 ಎಕರೆಯಲ್ಲಿ ಕರಾವಳಿಯ ಮಹಾತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಅನಂತ ಕುಮಾರ್ ರಾಸಾಯನಿಕ ಸಚಿವರಾಗಿದ್ದಾಗ ಮಂಜೂರಾತಿ ನೀಡಿದ್ದರು. 2022ರಲ್ಲಿ ಯೋಜನೆ ಜಾರಿಗೆ ಅನುಮೋದನೆ ದೊರೆತಿದ್ದರೂ 9.33 ಎಕರೆ ಭೂಸ್ವಾಧೀನ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಸಾಕಷ್ಟು ವಿಳಂಬವಾಗಿದೆ ಎಂದು ಕ್ಯಾ. ಚೌಟ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರಂಭದಲ್ಲಿ ಹಲವು ಪ್ಲಾಸ್ಟಿಕ್‌ ಕಂಪೆನಿಗಳು ಉದ್ದೇಶಿತ ಪ್ಲಾಸ್ಟಿಕ್‌ ಪಾರ್ಕ್‌ನಲ್ಲಿ ಘಟಕ ಸ್ಥಾಪಿಸುವುದಕ್ಕೆ ಮುಂದಾಗಿದ್ದವು. ಆದರೆ ಪಾರ್ಕ್‌ ನಿರ್ಮಾಣ ಕಾರ್ಯ ವಿಳಂಬವಾದ ಕಾರಣ ಉದ್ಯಮಿಗಳು ಬೇರೆಡೆ ಆಸಕ್ತಿ ತೋರಿಸಿದ್ದಾರೆ. ಇದು ಸಹಜವಾಗಿಯೇ ನಮ್ಮ ಕರಾವಳಿಯ ಇತರೆ ಯೋಜನೆಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಆದಷ್ಟು ಬೇಗ ಈ ಯೋಜನೆಗೆ ಎದುರಾಗಿರುವ ಅಡ್ಡಿ ದೂರ ಮಾಡಿ ಮಂಗಳೂರಿನ ಪ್ಲಾಸ್ಟಿಕ್‌ ಪಾರ್ಕ್‌ನಲ್ಲಿ ಬಂಡವಾಳ ಹೂಡುವುದಕ್ಕೆ ಉದ್ದಿಮೆದಾರರನ್ನು ಆಕರ್ಷಿಸಲು ತಾವು ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಐಎಡಿಬಿ ಮುಖ್ಯ ಎಂಜಿನಿಯರ್‌ಗೆ ಬರೆದಿರುವ ಪತ್ರದಲ್ಲಿ ಕ್ಯಾ. ಬ್ರಿಜೇಶ್‌ ಚೌಟ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ