ಕನ್ನಡಪ್ರಭ ವಾರ್ತೆ ಮಂಗಳೂರು
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರ್ಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್‌ಗೆ 30 ಸಾವಿರ ರು., 2 ಕಿಲೋ ವ್ಯಾಟ್ 60 ಸಾವಿರ ರು., 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‌ಗಳಿಗೆ 78 ಸಾವಿರ ರು. ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್‍ನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್‌ನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.
ಮೆಸ್ಕಾಂ ವ್ಯವಸ್ಥಾಪನಾ ನಿರ್ದೇಶಕ ಜಯಕುಮಾರ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಸಾರ್ವಜನಿಕರು ಅರ್ಜಿಯನ್ನು ನೋಂದಾಯಿಸಲು ಆನ್‍ಲೈನ್ www.pmsuryaghar.gov.in ಗೆ ಭೇಟಿ ನೀಡಬಹುದು ಎಂದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ, ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿ, ಪ್ರಧಾನಮಂತ್ರಿ ಸೋಲಾರ್ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್, ಲೀಡ್ ಬ್ಯಾಂಕ್ ಮೆನೇಜರ್ ಕವಿತಾ ಇದ್ದರು.