ಕನ್ನಡಪ್ರಭ ವಾರ್ತೆ ಬಾಗಲಕೋಟೆಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಶನಿವಾರ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಸಂತಾಪ ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಶನಿವಾರ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಸಂತಾಪ ಸೂಚಿಸಿದ್ದಾರೆ.
ಚೆನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳಿಗೆ ಹೆಸರುವಾಸಿಯಾಗಿದ್ದು, ಅವರ ನಿಧನದಿಂದ ದೇವೇಗೌಡ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ. ಈ ದುಃಖದ ಸಂದರ್ಭದಲ್ಲಿ ದೇವೇಗೌಡ ಕುಟುಂಬದ ಸದಸ್ಯರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಸಂಸದ ಪಿ.ಸಿ.ಗದ್ದಿಗೌಡರ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.