ಸಂಸದರಿಂದ ಮೋದಿ ಸರ್ಕಾರ ಸಾಧನೆ ಪುಸ್ತಕ ಹಸ್ತಾಂತರ

KannadaprabhaNewsNetwork |  
Published : Jun 27, 2026, 01:15 AM IST
26ಕೋಟ | Kannada Prabha

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕಳೆದ 12 ವರ್ಷಗಳಿಂದ ಮಾಡಿರುವ ಸಾಧನೆಗಳು, ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಪ್ರಗತಿ, ಸಮರ್ಥ ಮತ್ತು ಸಮೃದ್ಧ ಭಾರತದ ನಿರ್ಮಾಣಕ್ಕೆ ಮೋದಿ ಸರ್ಕಾರದ ಶ್ರಮದ ಮಾಹಿತಿಯನ್ನು ಒಳಗೊಂಡ ಪುಸ್ತಕವನ್ನು ಖ್ಯಾತ ಲೇಖಕಿ, ನಿವೃತ್ತ ಪ್ರಾಂಶುಪಾಲೆ ಮಾಧವಿ ಭಂಡಾರಿ ಅವರಿಗೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೀಡಿ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕಳೆದ 12 ವರ್ಷಗಳಿಂದ ಮಾಡಿರುವ ಸಾಧನೆಗಳು, ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಪ್ರಗತಿ, ಸಮರ್ಥ ಮತ್ತು ಸಮೃದ್ಧ ಭಾರತದ ನಿರ್ಮಾಣಕ್ಕೆ ಮೋದಿ ಸರ್ಕಾರದ ಶ್ರಮದ ಮಾಹಿತಿಯನ್ನು ಒಳಗೊಂಡ ಪುಸ್ತಕವನ್ನು ಖ್ಯಾತ ಲೇಖಕಿ, ನಿವೃತ್ತ ಪ್ರಾಂಶುಪಾಲೆ ಮಾಧವಿ ಭಂಡಾರಿ ಅವರಿಗೆ ಉಡುಪಿ - ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೀಡಿ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಮಾಧವಿ ಭಂಡಾರಿ ಮತ್ತು ಶ್ರೀಧರ ಭಂಡಾರಿ ದಂಪತಿ ಸಂಸದರನ್ನು ಮತ್ತು ಬಿಜೆಪಿ ಕಾರ್ಯಕರ್ತರನ್ನು ಗೌರವದಿಂದ ಬರಮಾಡಿಕೊಂಡು, ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಪಕ್ಷದ ಮುಖಂಡರಾದ ಕುಯಿಲಾಡಿ ಸುರೇಶ್ ನಾಯಕ್, ವಾರ್ಡ್ ಅಧ್ಯಕ್ಷ ನಿತಿನ್ ಪೈ, ಪ್ರಮುಖರಾದ ಸತೀಶ್ ಪೂಜಾರಿ, ಹರೀಶ್ ಮತ್ತು ಮೈಕಲ್ ಡಿಸೋಜ ಇದ್ದರು.

ಸಂಸದ ಶ್ರೀನಿವಾಸ ಪೂಜಾರಿ ಅವರು ಬ್ರಹ್ಮಾವರ ತಾಲೂಕಿನ ಕೋಟ ಹೋಬಳಿಯಲ್ಲಿನಿರ್ಮಿಸಲಾಗಿರುವ ನೂತನ ಪ್ರವಾಸಿ ಮಂದಿರವನ್ನು ವೀಕ್ಷಿಸಿದರು. ಕುಂದಾಪುರದ ಹಿಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಅವಧಿಯಲ್ಲಿ ಈ ಪ್ರವಾಸಿ ಮಂದಿರಕ್ಕೆ 5 ಕೋಟಿ ರು. ಮಂಜೂರಾಗಿದ್ದು, ಪ್ರವಾಸಿ ಮಂದಿರ ಗುಣಮಟ್ಟದ ಕಾಮಗಾರಿಯೊಂದಿಗೆ ಪೂರ್ಣಗೊಂಡಿದೆ. ನಮ್ಮೂರಿನಲ್ಲಿ ಇಂತಹ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣವಾದದ್ದು ಖುಷಿ ತಂದಿದೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜುಲೈಯಲ್ಲಿ ಬಾಲಿಕಾ ಜಾಗೃತಿ ಅಭಿಯಾನ
ಉಪ್ಪಿನಂಗಡಿ: ನೇತ್ರಾವತಿ ಒಡಲಿಗೆ ತ್ಯಾಜ್ಯ ನೀರು!