ಕಾಂಕ್ರೀಟ್ ರಸ್ತೆಯ ಗುಣಮಟ್ಟ ಕಾಯ್ದುಕೊಳ್ಳಲು ಸಂಸದ ಪ್ರಜ್ವಲ್‌ ರೇವಣ್ಣ ಸೂಚನೆ

KannadaprabhaNewsNetwork | Published : Jan 25, 2024 2:05 AM

ಸಾರಾಂಶ

ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಗುಣಮಟ್ಟ ಕಾಯ್ದುಕೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನಕನ್ನಡಪ್ರಭ ವಾರ್ತೆ ಹಾಸನ

ನರೇಗಾ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಗುಣಮಟ್ಟ ಕಾಯ್ದುಕೊಂಡು ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲು ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ೬೦:೪೦ ರ ಅನುಪಾತದಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿಗಳನ್ನು ನಿರ್ಮಾಣ ಮಾಡಲು ಸೂಚಿಸಿದರು.

ಜೆಜೆಎಂ ಕುಡಿಯುವ ನೀರು ಯೋಜನೆಯಡಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಬೇಕು. ಪೈಪ್‌ಲೈನ್ ಮಾಡಲು ತೆಗೆದಿರುವ ಗುಂಡಿಗಳನ್ನು ಕಡ್ಡಾಯವಾಗಿ ಗುತ್ತಿಗೆದಾರರು ಮುಚ್ಚಿದ ನಂತರ ಅವರಿಗೆ ಬಿಲ್ ಪಾವತಿಸಲು ತಿಳಿಸಿದರು.

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆವಹಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜೆಜೆಎಂ ಕುಡಿಯುವ ನೀರು ಯೋಜನೆಯಡಿ ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಅಂತಹ ಗುತ್ತಿಗೆದಾರ ನೋಟಿಸ್ ನೀಡಿ ಪ್ರಕರಣ ದಾಖಲಿಸಿ ಎಂದು ಸೂಚಿಸಿದರು.

ಶಾಸಕ ಎಚ್ ಡಿ ರೇವಣ್ಣ ಮಾತನಾಡಿ, ಅನೇಕ ಕೆರೆಗಳು, ಸ್ಮಶಾನ, ಗೋಮಾಳದ ಜಾಗಗಳು ಒತ್ತುವರಿಯಾಗಿದ್ದು, ತೆರವುಗೊಳಿಸಲು ಕ್ರಮವಹಿಸುವಂತೆ ತಿಳಿಸಿದರು.

ಪಿಎಂ ವೈಜಿಎಸ್ ಯೋಜನೆಯಡಿ ಕಾರ್ಯ ನಿವಹಿಸಲು ಸಿಬ್ಬಂದಿ ಕೊರತೆಯಿರುವುದನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿದರು.

ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಆರ್ ಪೂರ್ಣಿಮಾ, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ ಹಾಜರಿದ್ದರು.

ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ.

Share this article