ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಂಗಳವಾರ ದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಸಂಸದರು, ಈ ಯೋಜನೆಗಳ ಅನುಷ್ಠಾನಕ್ಕಾಗಿ ಶಿವಮೊಗ್ಗ-ಬೆಂಗಳೂರು ನಡುವಿನ ರೈಲ್ವೆ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಬೇಕಾಗಿದ್ದು, ಈ ಕುರಿತು ಗಮನಹರಿಸುವಂತೆ ಕೋರಿದರು.
ಶಿವಮೊಗ್ಗ ಸಮೀಪದ ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿ ಪ್ರಗತಿಯಲ್ಲಿದೆಯಾದರೂ, ಕಾಮಗಾರಿಯ ವೇಗ ತೃಪ್ತಿಕರವಾಗಿಲ್ಲ. ಇದರ ನಡುವೆ ವಂದೇ ಭಾರತ್ ರೈಲುಗಳನ್ನು ನಿರ್ವಹಿಸುವ ಸೌಲಭ್ಯಗಳೊಂದಿಗೆ ಈ ಕೋಚಿಂಗ್ ಡಿಪೋವನ್ನು ನಿರ್ಮಿಸಲು ಈ ಹಿಂದೆಯೇ ಕೋರಿಕೆ ಸಲ್ಲಿಸಿದ್ದು, ತಕ್ಷಣವೇ ಪ್ರಮುಖ ಮೂಲ ಸೌಕರ್ಯ ಸೌಲಭ್ಯವನ್ನು ಕಾರ್ಯಗತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.ತಾಳಗುಪ್ಪ-ಸಿರ್ಸಿ-ತಡಸ-ಹುಬ್ಬಳ್ಳಿ ಹೊಸ ರೈಲು ಮಾರ್ಗ ಮಂಜೂರಾತಿ ನೀಡಬೇಕು. ಈಗಾಗಲೇ ರೈಲ್ವೆ ಮಂಡಳಿಯು ಈ ಮಾರ್ಗದ ಸಮೀಕ್ಷೆಗೆ ಮಂಜೂರಾತಿ ನೀಡಿ, ಅದನ್ನು ಪೂರ್ಣಗೊಳಿಸಿ ಅದರ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಈ ಹೊಸ ರೈಲು ಮಾರ್ಗ ಯೋಜನೆಯು ಮಲೆನಾಡು ಮತ್ತು ಉತ್ತರ ಕರ್ನಾಟಕ ಪ್ರದೇಶದ ನಡುವೆ ರೈಲ್ವೆ ಸಂಪರ್ಕವನ್ನು ಒದಗಿಸಲು ಸಹಾಯ ಮಾಡುತ್ತದೆ. ಹೀಗಾಗಿ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಈ ಕಾಮಗಾರಿಯನ್ನು ಮಂಜೂರು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಹಿಂದೆಯೇ ಮಂಜೂರಾದ ಶಿವಮೊಗ್ಗ-ಬೀರೂರು ಡಬ್ಲಿಂಗ್ ಕಾಮಗಾರಿಯನ್ನು ಕಾರಣಾಂತರದಿಂದ ಸ್ಥಗಿತಗೊಳಿಸಲಾಗಿತ್ತು. ಆದರೀಗ ಶಿವಮೊಗ್ಗ-ಶಿಕಾರಿಪುರ- ರಾಣೆಬೆನ್ನೂರು ಹೊಸ ರೈಲು ಮಾರ್ಗ ಮತ್ತು ಕೋಟೆಗಂಗೂರು ಕೋಚಿಂಗ್ ಡಿಪೋ ನಿರ್ಮಾಣದಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಹಲವು ಪಟ್ಟು ಹೆಚ್ಚಾಗಲಿದೆ. ಆದ್ದರಿಂದ ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಮಂಜೂರಾತಿ ನೀಡಬೇಕು.
ಸ್ಥಗಿತಗೊಂಡಿರುವ ಶಿವಮೊಗ್ಗ ರೇಣಿಗುಂಟ (ತಿರುಪತಿ) ಚೆನ್ನೈ ರೈಲನ್ನು ಮರುಚಾಲನೆಗೊಳಿಸುವ ಮೂಲಕ ಸಾವಿರಾರು ಪ್ರಯಾಣಿಕರ ಸಮಸ್ಯೆಯನ್ನು ಬಗೆಹರಿಸಬೇಕು.
ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಶಿವಮೊಗ್ಗ ನಗರವು ಒಂದಾಗಿದ್ದು, ಯಶವಂತಪುರದಿಂದ ಶಿವಮೊಗ್ಗಕ್ಕೆ ‘ವಂದೇ ಭಾರತ್’ ರೈಲು ಪರಿಚಯಿಸಬೇಕು. ಇದರಿಂದ ಮಲೆನಾಡು ಭಾಗದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಇದೇ ವೇಳೆ ಆಗ್ರಹಪಡಿಸಿದ್ದಾರೆ.
ರೈಲು ಸಂಖ್ಯೆ 16581/16582 ಬೆಂಗಳೂರು-ಶಿವಮೊಗ್ಗ ವಿಶೇಷ ರೈಲು ಕಳೆದ 4 ವರ್ಷಗಳಿಂದ ವಾರದಲ್ಲಿ ಮೂರು ದಿನ ಸಂಚರಿಸುತ್ತಿದ್ದು, ಇದನ್ನು ಪ್ರತಿದಿನವೂ ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಮನವಿ ಮಾಡಿದರು.
ಬೈಂದೂರಿನಲ್ಲಿ ನಿಲುಗಡೆ:
ಸೇನಾಪುರದಲ್ಲಿ ರೈಲು ನಿಲುಗಡೆ:
ಬೆಂಗಳೂರು-ಶಿವಮೊಗ್ಗ, ನಡುವಿನ ಜನಶತಾಬ್ದಿ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ:16227/16228 ತಾಳಗುಪ್ಪ-ಮೈಸೂರು ನಡುವಿನ ಎಕ್ಸ್‌ಪ್ರೆಸ್ ರೈಲುಗಳ ಸಾಮಾನ್ಯ ಕೋಚ್ ಗಳು ಹಾಗೂ ಎ.ಸಿ. ಕೋಚ್ ಗಳು ತುಂಬಾ ಹಳೆಯದಾಗಿದ್ದು. ನಿರ್ವಹಣೆಯು ಸಾಕಾಗುತ್ತಿಲ್ಲ. ಈ ರೈಲುಗಳಲ್ಲಿ ಓಡಾಡುವ ಪ್ರಯಾಣಿಕರು ಕೋಚ್ ಗಳ ಅವ್ಯವಸ್ಥೆಗಳ ಬಗ್ಗೆ ಸಾಕಷ್ಟು ದೂರುಗಳನ್ನು ನೀಡಿರುವುದರಿಂದ ಹೊಸ ಕೋಚ್‌ಗಳನ್ನು ಒದಗಿಸುವಂತೆ ಸಚಿವರನ್ನು ಕೋರಿದರು. ಈ ಎಲ್ಲ ಮನವಿಗಳ ಬಗ್ಗೆ ಕೇಂದ್ರ ರೈಲ್ವೇ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.