ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಸದ ಮನವಿ

KannadaprabhaNewsNetwork |  
Published : Jul 26, 2025, 02:00 AM IST
ಕೇಂದ್ರ ಬಂದರು ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ ಸಲ್ಲಿಕೆ | Kannada Prabha

ಸಾರಾಂಶ

ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರುಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.ದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿ ಮಾಡಿದ ಸಂಸದರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಮ್ಮ ದೇಶದ ಮೆರಿಟೈಮ್‌ ಸಾಮರ್ಥ್ಯಕ್ಕೆ ಹೊಂದಿಕೊಂಡು ಭಾರತವನ್ನು ಜಾಗತಿಕ ಮೆರಿಟೈಮ್‌ ಹಬ್‌ ಮಾಡುವ ದೂರದೃಷ್ಟಿಯನ್ನು ಹೊಂದಿದ್ದಾರೆ. ಹೀಗಿರುವಾಗ, ಬಹಳ ಶ್ರೀಮಂತ ಮೆರಿಟೈಮ್‌ ಪರಂಪರೆಯನ್ನು ಹೊಂದಿರುವ ಮಂಗಳೂರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿವಿಯನ್ನು ಸ್ಥಾಪಿಸುವುದಕ್ಕೆ ವಿಪುಲ ಅವಕಾಶದ ಜತೆಗೆ ಸೂಕ್ತ ಸ್ಥಳವಾಗಿದೆ. ಇನ್ನು 16ನೇ ಶತಮಾನದಲ್ಲಿ ಉಳ್ಳಾಲದ ರಾಣಿ ಅಬ್ಬಕ್ಕ ತಮ್ಮ ವೀರ ಪರಾಕ್ರಮ, ನಾಯಕತ್ವದಲ್ಲಿ ಪೋರ್ಚುಗೀಸರ ವಿರುದ್ಧ ಧೈರ್ಯವಾಗಿ ಹೋರಾಡುವ ಮೂಲಕ ಕರಾವಳಿಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿರುವ ಧೀರ ಮಹಿಳೆ. ತನ್ನ ಧೈರ್ಯ ಹಾಗೂ ತಂತ್ರಗಾರಿಕೆಯಿಂದ ಭಾರತದ ಕಡಲ ತೀರವನ್ನು ಹೇಗೆ ರಕ್ಷಣೆ ಮಾಡಿದ್ದರು ಎನ್ನುವುದಕ್ಕೆ ರಾಣಿ ಅಬ್ಬಕ್ಕ ಅವರ ರಾಜ್ಯಭಾರ ಉತ್ತಮ ನಿದರ್ಶನ. 2025 ವರ್ಷದಲ್ಲಿ ವೀರರಾಣಿ ಅಬ್ಬಕ್ಕ ಅವರ 500ನೇ ವರ್ಷಾಚರಣೆ ಮಾಡಲಾಗುತ್ತಿದೆ. ಇಂಥಹ ಸಂದರ್ಭದಲ್ಲಿ ಮಂಗಳೂರಿನಲ್ಲಿ ಕಡಲ ರಕ್ಷಣೆಗೆ ಪೂರಕವಾಗುವ ಮೆರಿಟೈಮ್‌ ವಿವಿಯನ್ನು ಸ್ಥಾಪಿಸಿ ಅದಕ್ಕೆ ರಾಣಿ ಅಬ್ಬಕ್ಕ ಹೆಸರಿಡುವುದು ಅತ್ಯಂತ ಸೂಕ್ತ ಹಾಗೂ ಔಚಿತ್ಯಪೂರ್ಣವಾದದ್ದು ಎಂದು ಕ್ಯಾ. ಚೌಟ ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.ಇನ್ನೊಂದೆಡೆ, ನವ ಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ) ತನ್ನ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವಾಗ, ಬಂದರು ನಗರಿ ಮಂಗಳೂರಿನಲ್ಲಿ ಮೆರಿಟೈಮ್‌ ವಿವಿ ಸ್ಥಾಪಿಸುವುದು ಕೂಡ ಹೆಚ್ಚು ಪ್ರಸ್ತುತವೆನಿಸುತ್ತದೆ. ಇದರಿಂದ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಆರ್ಥಿಕತೆಯು ಮತ್ತಷ್ಟು ಸದೃಢಗೊಳ್ಳುತ್ತದೆ. ಹೀಗಾಗಿ ಈ ವಿವಿ ಸ್ಥಾಪನೆ ಪ್ರಸ್ತಾವನೆಯು ಪ್ರಧಾನಮಂತ್ರಿಯವರ ''''''''ಮೆರಿಟೈಮ್ ಅಮೃತ್ ಕಾಲ್ ವಿಷನ್ 2047'''''''' ದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ ಎಂದು ಕ್ಯಾ. ಚೌಟ ಅವರು ಅಭಿಪ್ರಾಯಪಟ್ಟಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ