ಕನ್ನಡಪ್ರಭ ವಾರ್ತೆ ಬೆಳಗಾವಿ
ಲೋಕಸಭೆ ಚುನಾವಣೆ ವೇಳೆ ಬೆಳಗಾವಿ ನಗರಕ್ಕೆ ಆಗಮಿಸಿ, ಗೆಲುವಿಗೆ ಸಹಕಾರ ನೀಡಿದ್ದನ್ನು ಸ್ಮರಿಸಿದರು. ಸಂಸದರು ಪ್ರಧಾನಿಗೆ ಸನ್ಮಾನಿಸಲು ಹೋದಾಗ ನಾನು ಸಾಮಾನ್ಯ ಕಾರ್ಯಕರ್ತ ಸನ್ಮಾನ ಬೇಡ ಎಂದು ನಯವಾಗಿ ನಿರಾಕರಿಸಿ ಕುಶಲೋಪರಿ ವಿಚಾರಿಸಿದರು. ಈ ವೇಳೆ ಹುಬ್ಬಳ್ಳಿಯ ಸಾಹಿತ್ಯ ಭಂಡಾರ ಪ್ರಕಟಿಸಿದ Temple treasures a journey through time ಪುಸ್ತಕವನ್ನು ಪ್ರಧಾನಿಗೆ ನೀಡಿದರು.ಸಂಸದರು ಸವದತ್ತಿಯ ಶ್ರೀಕ್ಷೇತ್ರ ರೇಣುಕಾ ಯಲ್ಲಮ್ಮದೇವಿ ದೇವಸ್ಥಾನ ಅಭಿವೃದ್ಧಿಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಕ್ಕೆ ಪ್ರಧಾನಿಗೆ ಧನ್ಯವಾದ ತಿಳಿಸಿದರಲ್ಲದೆ, ರಾಮದುರ್ಗದಲ್ಲಿರುವ ಐತಿಹಾಸಿಕ ಶಬರಿಕೊಳ್ಳ ಅಭಿವೃದ್ಧಿಪಡಿಸುವಂತೆ, ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕು, ಉಡಾನ್ 3.0 ಯೋಜನೆಯ ಅವಧಿಯನ್ನು ಇನ್ನೂ ಹೆಚ್ಚಿಸಿದಲ್ಲಿ ಪ್ರಯಾಣಿಕರಿಗೆ ಹಾಗೂ ಬೆಳಗಾವಿ ನಗರ ಹಾಗೂ 2 ಟಯರ್ ಸಿಟಿಗಳ ವಿಮಾನಯಾನ ಸೇವೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಮನವಿ ಸಲ್ಲಿಸಿದರು. ಬೇಡಿಕೆ ಆಲಿಸಿದ ಪ್ರಧಾನಿ ಈ ಬಗ್ಗೆ ರೈಲ್ವೆ ಸಚಿವರಿಗೆ ಸೂಚಿಸುವ ಭರವಸೆ ನೀಡಿದರು ಎಂದು ಸಂಸದರು ತಿಳಿಸಿದ್ದಾರೆ.