ಭೂ ಕುಸಿತ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್‌

KannadaprabhaNewsNetwork |  
Published : May 27, 2025, 02:16 AM IST

ಸಾರಾಂಶ

ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಸಂಸದ ಶ್ರೇಯಸ್ ಪಟೇಲ್‌ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಾರಿಯೂ ಕೂಡ ಭೂ ಕುಸಿತ ಉಂಟಾಗಿದೆ. ಆದರೆ ಕಳೆದ ಬಾರಿ ಮುಂಜಾಗ್ರತ ಕ್ರಮವನ್ನುಕೈಕೊಂಡಿದ್ದರಿಂದ ಆನೆಮಹಲ್ ಹಾಗೂ ಮತ್ತಿತರ ಸ್ಥಳಗಳಲ್ಲಿ ಸ್ವಲ್ಪ ಭೂ ಕುಸಿತ ಉಂಟಾಗುತ್ತಿರುವುದರಿಂದ ಉಪ ವಿಭಾಗಾಧಿಕಾರಿ ಹಾಗೂ ಎನ್‌ಎಚ್‌ಎಐ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಸಂಸದ ಶ್ರೇಯಸ್ ಪಟೇಲ್‌ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಇನ್ನೂ ಎರಡು ಕಿ.ಮೀ ರಸ್ತೆ ಕಾಮಗಾರಿಗೆ ಭೂಕುಸಿತವೇ ದೊಡ್ಡ ಸವಾಲಾಗಿದೆ, ತಡೆಗೋಡೆ ಕಟ್ಟಿರುವ ಕೆಲವು ಕಡೆಗಳಲ್ಲಿ ಮಣ್ಣು ಕುಸಿದಿದ್ದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಜವಾಬ್ದಾರಿಯುತವಾಗಿ ಕೆಲಸ ನಿರ್ವಹಣೆ ಮಾಡುವಂತೆ ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿಯೂ ಕೂಡ ಭೂ ಕುಸಿತ ಉಂಟಾಗಿದೆ. ಆದರೆ ಕಳೆದ ಬಾರಿ ಮುಂಜಾಗ್ರತ ಕ್ರಮವನ್ನುಕೈಕೊಂಡಿದ್ದರಿಂದ ಆನೆಮಹಲ್ ಹಾಗೂ ಮತ್ತಿತರ ಸ್ಥಳಗಳಲ್ಲಿ ಸ್ವಲ್ಪ ಭೂ ಕುಸಿತ ಉಂಟಾಗುತ್ತಿರುವುದರಿಂದ ಉಪ ವಿಭಾಗಾಧಿಕಾರಿ ಹಾಗೂ ಎನ್‌ಎಚ್‌ಎಐ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ನಾವು ಕಳೆದ ಬಾರಿ ಭೇಟಿ ನೀಡಿದಾಗ ಹಾಗೂ ಇಂದು ಭೇಟಿ ನೀಡಿ ನೋಡಿದಾಗ ಸಾಕಷ್ಟು ಕೆಲಸಗಳಾಗಿವೆ. ಆದರೂ ಯಾವ ರೀತಿಯಾಗಿ ವಿಫಲರಾಗಿದ್ದಾರೆ ಎಂದು ಪರಿಶೀಲಿಸಿದಾಗ ಮಣ್ಣು ಬಹಳ ತೇವಾಂಶಯುತವಾಗಿರುವುದರಿಂದ ಕುಸಿತ ಉಂಟಾಗುತ್ತಿದೆ. ಹೆದ್ದಾರಿಯ ಬಲಭಾಗದಲ್ಲಿ ರಸ್ತೆ ಸಂಚಾರಕ್ಕೆದಾರಿ ಮಾಡಿಕೊಡುತ್ತೇವೆ. ಒಟ್ಟಾರೆಯಾಗಿ ಸಾರ್ವಜನಿಕರಿಗೆ ಸಂಚಾರಕ್ಕೆಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುತ್ತೇವೆ ಎಂದರು.ಕೇಂದ್ರ ಸಾರಿಗೆ ಸಚಿವರನ್ನು ಈಗಾಗಲೇ ಭೇಟಿ ಮಾಡಿದ್ದು, ೧೩ ಕೋಟಿಯ ವೈಜ್ಞಾನಿಕ ಯೋಜನೆಯನ್ನು ಸಿದ್ಧಪಡಿಸಿದ್ದಾರೆ. ಈಗಾಗಲೇ ಟೆಂಡರ್‌ ಕೂಡ ಕರೆಯಲಾಗಿದೆ. ವೆಸ್ಟ್ ಬೆಂಗಾಳ್ ಮಾದರಿಯಲ್ಲಿ ಟರ್ಫಿಂಗ್ ಕೆಲಸ ಮಾಡಲು ಏಜೆನ್ಸಿ ಕೂಡ ಫಿಕ್ಸ್‌ ಆಗಿದೆ ಎಂದ ಅವರು, ಕೆಲಸ ಮುಂದಿನ ಮಾನ್ಸೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಮುಂದೆ ಯಾವುದೇ ರೀತಿಯ ಭೂ ಕುಸಿತ ಉಂಟಾಗುವುದಿಲ್ಲ ಎಂದು ತಿಳಿಸಿದರು. ಯಾವುದೇ ರೀತಿಯ ಪ್ರಾಣಾಪಾಯವಾಗದ ರೀತಿಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲು ನಾವೆಲ್ಲರೂ ಸನ್ನಧ್ಧರಾಗಿದ್ದೇವೆ ಎಂದು ಹೇಳಿದರು.ಕಾಮಗಾರಿ ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ, ಕಳಪೆ ಕಾಮಗಾರಿ ಮಾಡಿದ್ದರೆ ಪರಿಶೀಲಿಸಿ ಅದರ ಸತ್ಯತೆಯನ್ನು ತಿಳಿದು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ಮಳೆಯ ಕಾಲ ಮುಗಿಯುವವರೆಗೂ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು.

ಉಪ ವಿಭಾಗಾಧಿಕಾರಿ ಶೃತಿ, ಎನ್‌ಎಚ್‌ಎಐ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ