ಸಂಸದ ಶ್ರೇಯಸ್ ಪಟೇಲ್ ಜನ್ಮದಿನ

KannadaprabhaNewsNetwork |  
Published : Nov 17, 2026, 01:45 AM IST
16ಎಚ್ಎಸ್ಎನ್8 : ಹಾಸನಾಂಬ ದೇವಾಲಯದ ಮುಂದೆ ಈಡುಗಾಯಿ ಹಾಕುತ್ತಿರುವುದು. | Kannada Prabha

ಸಾರಾಂಶ

ಸಂಸದ ಶ್ರೇಯಸ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ಹಾಸನ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಗ್ರೂಪ್ ಮಹಿಳಾ ನೌಕರರು, ಸಿಬ್ಬಂದಿ ವರ್ಗ ಹಾಗೂ ಮಹಿಳಾ ಭದ್ರತಾ ಸಿಬ್ಬಂದಿಗೆ ಸೀರೆ ಮತ್ತು ಸಿಹಿ ವಿತರಿಸುವ ಮೂಲಕ ಅವರ ಸೇವೆಯನ್ನು ಗೌರವಿಸಲಾಯಿತು. ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಹಾಸನ

ಸಂಸದ ಶ್ರೇಯಸ್ ಪಟೇಲ್ ಅವರ ಜನ್ಮದಿನದ ಅಂಗವಾಗಿ ಹಾಸನ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ವಿವಿಧ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಪ್ರತಿವರ್ಷ ಸಂಸದರ ಜನ್ಮದಿನವನ್ನು ಸೇವಾ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು, ಈ ಬಾರಿಯೂ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳ ಮೂಲಕ ತಮ್ಮ ನಾಯಕನ ಜನ್ಮದಿನವನ್ನು ವಿಶೇಷವಾಗಿ ಆಚರಿಸಿದರು. ನಗರದ ಅಧಿದೇವತೆ ಹಾಸನಾಂಬೆ ದೇವಾಲಯ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸಂಸದ ಶ್ರೇಯಸ್ ಪಟೇಲ್ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ, ೧೦೧ ಈಡುಗಾಯಿ ಒಡೆಯುವ ಮೂಲಕ ಅವರ ಆಯುರಾರೋಗ್ಯ ಮತ್ತು ಜನಸೇವೆಗೆ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಇದೇ ಸಂದರ್ಭದಲ್ಲಿ ನಗರದ ಹಝರ್‌ತ್ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಎನ್. ಆರ್‌. ವೃತ್ತದಲ್ಲಿರುವ ಚರ್ಚ್‌ನಲ್ಲಿಯೂ ಸಂಸದರ ಹೆಸರಿನಲ್ಲಿ ಪ್ರಾರ್ಥನೆ ಸಲ್ಲಿಸಿ ಸರ್ವಧರ್ಮ ಸಮನ್ವಯದ ಸಂದೇಶ ಸಾರಲಾಯಿತು. ನಂತರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಗ್ರೂಪ್ ಮಹಿಳಾ ನೌಕರರು, ಸಿಬ್ಬಂದಿ ವರ್ಗ ಹಾಗೂ ಮಹಿಳಾ ಭದ್ರತಾ ಸಿಬ್ಬಂದಿಗೆ ಸೀರೆ ಮತ್ತು ಸಿಹಿ ವಿತರಿಸುವ ಮೂಲಕ ಅವರ ಸೇವೆಯನ್ನು ಗೌರವಿಸಲಾಯಿತು. ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಯಿತು.ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಂಜಿತ್ ಮಾಧ್ಯಮದೊಂದಿಗೆ ಮಾತನಾಡಿ, ಸಂಸದ ಶ್ರೇಯಸ್ ಪಟೇಲ್ ಅವರು ಯುವಜನರ ನೆಚ್ಚಿನ ನಾಯಕ ಹಾಗೂ ಜನಸೇವೆಗೆ ಸದಾ ಆದ್ಯತೆ ನೀಡುವ ವ್ಯಕ್ತಿಯಾಗಿದ್ದಾರೆ. ಅವರ ಜನ್ಮದಿನವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜದ ವಿವಿಧ ವರ್ಗಗಳ ಜನರಿಗೆ ನೆರವಾಗುವ ಸೇವಾ ಕಾರ್ಯಗಳ ಮೂಲಕ ಆಚರಿಸುವುದು ನಮ್ಮ ಉದ್ದೇಶವಾಗಿದೆ. ಹಾಸನಾಂಬೆ ತಾಯಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯ ಆಶೀರ್ವಾದದಿಂದ ಅವರಿಗೆ ಉತ್ತಮ ಆರೋಗ್ಯ, ಆಯಸ್ಸು, ಐಶ್ವರ್ಯ ದೊರೆಯಲಿ. ಇನ್ನಷ್ಟು ಜನಪರ ಕೆಲಸಗಳನ್ನು ಮಾಡುವ ಶಕ್ತಿ ಲಭಿಸಲಿ ಎಂದು ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ಶಿವಕುಮಾರ್‌, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿವೇಕ್ ಎಸ್. ಕಿಶೋರ್‌, ಜಿಲ್ಲಾ ಉಪಾಧ್ಯಕ್ಷ ಅಲ್ವಿನ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಫರ್ಮಾನ್, ನಗರ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರ್ಮಾನ್, ಮನೋಜ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೃಕ್ಷಮಾತೆ ಡಾ ಸಾಲುಮರದ ತಿಮ್ಮಕ್ಕ ಸ್ಮರಣೆ ಕಾರ್ಯಕ್ರಮ
ಸಾರ್ವಜನಿಕರ ಮನವಿಗೆ ಸಕಾಲದಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು: ಡಾ.ಮಂತರ್ ಗೌಡ