ಸಚಿವ ಗಡ್ಕರಿ ಭೇಟಿ ಮಾಡಿದ ಸಂಸದ ಶ್ರೇಯಸ್‌

KannadaprabhaNewsNetwork |  
Published : Dec 13, 2024, 12:49 AM IST
12ಎಚ್ಎಸ್ಎನ್20 :  | Kannada Prabha

ಸಾರಾಂಶ

ಸಂಸದರಾದ ಶ್ರೇಯಸ್‌ ಎಂ ಪಟೇಲ್‌ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ, ಭಾರತ ಮಾಲಾ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಅನುಮೋದನೆಗಾಗಿ ಮನವಿ ಸಲ್ಲಿಸಿದರು. ಪ್ರಸ್ತುತ ಡಿಪಿಆರ್‌ ಹಂತದಲ್ಲಿರುವ ಹಾಸನ ಹಿರಿಯೂರು ಹೆದ್ದಾರಿ ಯೋಜನೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಸಂಸದರಾದ ಶ್ರೇಯಸ್‌ ಎಂ ಪಟೇಲ್‌ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ, ಭಾರತ ಮಾಲಾ ಯೋಜನೆಯಡಿ ರಸ್ತೆ ಅಭಿವೃದ್ಧಿಯ ಅನುಮೋದನೆಗಾಗಿ ಮನವಿ ಸಲ್ಲಿಸಿದರು.

ಹಾಸನ ರಾಯಚೂರು ಎಕನಾಮಿಕ್ ಕಾರಿಡಾರ್‌ನ ಭಾಗವಾದ ಹಾಸನ ಹಿರಿಯೂರು ಎಕನಾಮಿಕ್ ಕಾರಿಡಾರ್ ಅಭಿವೃದ್ಧಿಯ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು. ಈ ಉದ್ದೇಶಿತ ಹೆದ್ದಾರಿ, ಹಾಸನ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಸಂಪರ್ಕಿಸಲಿದೆ. ಇದು ಸರಕು ಸಾಗಾಣಿಕೆ ಮತ್ತು ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಥವಾಗಿಸಲಿದೆ. ಪ್ರಸ್ತುತ ಡಿಪಿಆರ್‌ ಹಂತದಲ್ಲಿರುವ ಹಾಸನ ಹಿರಿಯೂರು ಹೆದ್ದಾರಿ ಯೋಜನೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ