ಗಾಯಾಳುಗಳ ಭೇಟಿ ಮಾಡಿದ ಸಂಸದ ಶ್ರೇಯಸ್‌

KannadaprabhaNewsNetwork |  
Published : Jun 06, 2026, 01:30 AM IST
5ಎಚ್ಎಸ್ಎನ್8 : ದಾಳಿಗೊಳಗಾದವರ ಕುಟುಂಬಸ್ಥರಿಗೆ ದೈರ್ಯ ಹೇಳಿದ ಸಂಸದ ಶ್ರೇಯಸ್‌. | Kannada Prabha

ಸಾರಾಂಶ

ಅಂಕವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರನ್ನು ಸಂಸದರಾದ ಶ್ರೇಯಸ್‌ ಪಟೇಲ್‌ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಚಿರತೆ ದಾಳಿಯಲ್ಲಿ ಗಾಯಗೊಂಡವರನ್ನು ಮೊದಲು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. ವೈದ್ಯಾಧಿಕಾರಿಗಳು ಹಾಗೂ ತಜ್ಞರ ತಂಡ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದು, ನಾಗೇಶ್ ಅವರ ಮೇಲೆ ಚಿರತೆ ಭೀಕರವಾಗಿ ದಾಳಿ ನಡೆಸಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಹೊಳೆನರಸೀಪುರ ತಾಲೂಕಿನ ಅಂಕವಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರನ್ನು ಸಂಸದರಾದ ಶ್ರೇಯಸ್‌ ಪಟೇಲ್‌ ಹಾಗೂ ಜಿಲ್ಲಾಧಿಕಾರಿ ಲತಾ ಕುಮಾರಿ ಶುಕ್ರವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಘಟನೆ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಸಂಸದ ಶ್ರೇಯಸ್ ಎಂ. ಪಟೇಲ್, ಚಿರತೆ ದಾಳಿಯಲ್ಲಿ ಗಾಯಗೊಂಡವರನ್ನು ಮೊದಲು ಹೊಳೆನರಸೀಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. ವೈದ್ಯಾಧಿಕಾರಿಗಳು ಹಾಗೂ ತಜ್ಞರ ತಂಡ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡುತ್ತಿದ್ದು, ನಾಗೇಶ್ ಅವರ ಮೇಲೆ ಚಿರತೆ ಭೀಕರವಾಗಿ ದಾಳಿ ನಡೆಸಿದೆ ಎಂದರು.

ಜಿಲ್ಲಾಧಿಕಾರಿ ಕೆ. ಎಸ್. ಲತಾಕುಮಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ನೀಡುವ ಜೊತೆಗೆ ಚಿರತೆಯ ಚಲನವಲನದ ಮೇಲೆ ನಿಗಾ ಇಡಲಾಗಿದೆ. ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಒಂಟಿಯಾಗಿ ಹೊಲಗದ್ದೆಗಳಿಗೆ ತೆರಳದಂತೆ ಹಾಗೂ ಅರಣ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಚಿರತೆಯನ್ನು ಈಗಾಗಲೇ ಸೆರೆ ಹಿಡಿಯಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ