ಕಾನೂನು ಕಾಲೇಜಿಗೆ ಸಂಸದ ಸುನೀಲ್ ಬೋಸ್ ಭೇಟಿ

KannadaprabhaNewsNetwork |  
Published : Jun 06, 2025, 12:18 AM ISTUpdated : Jun 06, 2025, 12:19 AM IST
 ಚಾಮರಾಜನಗರದ ಸರ್ಕಾರಿ ಕಾನೂನು ಕಾಲೇಜಿಗೆ ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಎಲ್.ಎಲ್.ಬಿ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರು ಗುರುವಾರ  ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಚಾಮರಾಜನಗರದ ಸರ್ಕಾರಿ ಕಾನೂನು ಕಾಲೇಜಿಗೆ ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಎಲ್.ಎಲ್.ಬಿ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಸಂಸದ ಸುನೀಲ್ ಬೋಸ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಸರ್ಕಾರಿ ಕಾನೂನು ಕಾಲೇಜಿಗೆ ಪ್ರಸಕ್ತ ಸಾಲಿನಿಂದಲೇ ಮೂರು ವರ್ಷಗಳ ಎಲ್.ಎಲ್.ಬಿ ಪದವಿ ಕೋರ್ಸ್ ಪ್ರವೇಶಕ್ಕೆ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರು ಗುರುವಾರ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರೊಂದಿಗೆ ಕಾಲೇಜಿಗೆ ಭೇಟಿ ನೀಡಿದ ಅವರು ಕಾಲೇಜಿನಲ್ಲಿರುವ ಕೊಠಡಿಗಳು, ಲಭ್ಯವಿರುವ ಪೀಠೋಪಕರಣಗಳನ್ನು ವೀಕ್ಷಿಸಿದರು. ಗ್ರಂಥಾಲಯ, ಪುಸ್ತಕಗಳನ್ನು ಇಡಲು ಕಪಾಟು, ಇನ್ನು ಬೇಕಿರುವ ಪೀಠೋಪಕರಣಗಳು, ಕುಡಿಯುವ ನೀರು, ಇತರೆ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ಕಾಲೇಜಿಗೆ ಅಗತ್ಯವಿರುವ ಸೌಲಭ್ಯಗಳು, ಶೌಚಾಲಯ, ಕಟ್ಟಡ ಮೇಲ್ಚಾವಣಿ ದುರಸ್ತಿ ಹಾಗೂ ಪ್ರಸ್ತುತ ಕಟ್ಟಡಕ್ಕೆ ಆಗಬೇಕಿರುವ ಇತರೆ ಸೌಕರ್ಯಗಳ ಬಗ್ಗೆ ಕಾಲೇಜು ಪ್ರಾಂಶುಪಾಲರಾದ ಕೆ.ಎಸ್. ಲಲಿತಾ ಬಾಯಿ ಅವರಿಂದ ಮಾಹಿತಿ ಪಡೆದರು. ಇದೇ ವೇಳೆ ಗ್ರಂಥಾಲಯ ಪುಸ್ತಕಗಳು, ಶುದ್ಧ ಕುಡಿಯುವ ನೀರು ಸಂಬಂಧ ಅಗತ್ಯವಿರುವ ಅನುದಾನದ ನೆರವು ನೀಡಲಾಗುವುದೆಂದು ಸಂಸದ ಸುನೀಲ್ ಬೋಸ್‌ ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರೊಂದಿಗೆ ಕಾಲೇಜು ಕಟ್ಟಡಕ್ಕೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸಂಸದರು ಚರ್ಚಿಸಿದರು. ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುನೀಲ್ ಬೋಸ್, ಎಲ್ಲರ ಪರಿಶ್ರಮದ ಪ್ರಯತ್ನದ ಫಲವಾಗಿ ಜಿಲ್ಲೆಗೆ ಕಾನೂನು ಕಾಲೇಜಿಗೆ ಅನುಮೋದನೆ ದೊರೆತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಕಾನೂನು ಪದವಿ ಅಧ್ಯಯನ ಮಾಡಲು ಬೇರೆ ಕಡೆ ಹೋಗಬೇಕಿತ್ತು. ಜಿಲ್ಲೆಯಲ್ಲಿಯೇ ಕಾನೂನು ಕಾಲೇಜಿಗೆ ಅನುಮೋದನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು. ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಇತರರು ಈ ಸಂದರ್ಭದಲ್ಲಿ ಇದ್ದರು. ಬಳಿಕ ಸಂಸದ ಸುನೀಲ್ ಬೋಸ್ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.

PREV

Recommended Stories

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು