ಕನ್ನಡಪ್ರಭ ವಾರ್ತೆ ಸಂಡೂರು
ನಂತರ ಮಾತನಾಡಿದ ಸಂಸದರು, ಶಿಕ್ಷಣ, ಆರೋಗ್ಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಕ್ಷೇತ್ರವನ್ನು ನಂಜುಂಡಪ್ಪ ವರದಿಯನ್ವಯ ಅತಿ ಹಿಂದುಳಿದ ತಾಲೂಕೆಂಬ ಹಣೆಪಟ್ಟಿಯನ್ನು ತೆಗೆಯಲು ಶ್ರಮಿಸಲಾಗುತ್ತಿದೆ. ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಉತ್ತಮ ವಾತಾವರಣ ನಿರ್ಮಿಸಬೇಕು. ವಸತಿನಿಲಯಕ್ಕೆ ಬೇಕಾದ ಹೆಚ್ಚುವರಿ ಪರಿಕರಗಳಿಗೆ ಬೇಡಿಕೆ ಸಲ್ಲಿಸಿದಲ್ಲಿ, ಅಗತ್ಯ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಶಾಸಕಿ ಈ. ಅನ್ನಪೂರ್ಣ ತುಕಾರಾಂ, ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ತಿಳಿಸಿದರು.ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಕೆ. ವೆಂಕಟೇಶ್ ಮಾತನಾಡಿ, ಸಂಸದ ಈ. ತುಕಾರಾಮ ಸರ್ಕಾರದ ಗಮನ ಸೆಳೆದು, ಲೋಕೋಪಯೋಗಿ ಇಲಾಖೆಯ ನಿವೇಶನವನ್ನು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ ಮಾಡಿಸಿದ್ದಲ್ಲದೆ, ಕೆಕೆಆರ್‌ಡಿಬಿಯ ₹೫ ಕೋಟಿ ಅನುದಾನ ಒದಗಿಸಿ, ಸುಸಜ್ಜಿತವಾದ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಸಹಕರಿಸಿದರು. ವಸತಿ ನಿಲಯದಲ್ಲಿ ರೀಡಿಂಗ್ ಚೇರ್, ಡೈನಿಂಗ್ ಟೇಬಲ್, ಮಂಚ, ಬೆಡ್, ಗ್ರಂಥಾಲಯ, ಅಲ್ಮೆರಾ, ಜನರೇಟರ್ ಮುಂತಾದ ಮೂಲ ಸೌಕರ್ಯ ಕಲ್ಪಿಸಲಾಗಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದ, ತಹಶೀಲ್ದಾರ್ ಜಿ. ಅನಿಲ್‌ಕುಮಾರ್, ತಾಪಂ ಇಒ ಮಡಗಿನ ಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ಪುರಸಭೆ ಅಧ್ಯಕ್ಷ ಎಸ್. ಸಿರಾಜ್ ಹುಸೇನ್, ಉಪಾಧ್ಯಕ್ಷೆ ಎನ್.ಸಿ. ಲತಾ ಮುಂತಾದವರಿದ್ದರು.