ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ಸಂಸದೆ ಭೇಟಿ

KannadaprabhaNewsNetwork |  
Published : Nov 05, 2024, 01:38 AM IST
ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ ನೀಡಿ, ಪರಿಶೀಲಿಸಿದರು | Kannada Prabha

ಸಾರಾಂಶ

ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭೇಟಿ ನೀಡಿ, ಪ್ರಾಣಿಗಳನ್ನು ವೀಕ್ಷಿಸಿ ಪ್ರಾಣಿಗಳ ಪಾಲನೆ-ಪೋಷಣೆ ಹಾಗೂ ಸಂಗ್ರಹಾಲಯದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ತಾಲೂಕಿನ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮಿನಿ ಪ್ರಾಣಿ ಸಂಗ್ರಹಾಲಯಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭೇಟಿ ನೀಡಿ, ಪ್ರಾಣಿಗಳನ್ನು ವೀಕ್ಷಿಸಿ ಪ್ರಾಣಿಗಳ ಪಾಲನೆ-ಪೋಷಣೆ ಹಾಗೂ ಸಂಗ್ರಹಾಲಯದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕ್ಷೇತ್ರದ ಶಾಸಕರ ಪ್ರಯತ್ನದಿಂದ ಪ್ರಾಣಿ ಸಂಗ್ರಹಾಲಯ ಬಹಳಷ್ಟು ಅಭಿವೃದ್ಧಿಯಾಗಿದೆ. ಸದ್ಯ ಕರಡಿ, ನವಿಲು, ಜಿಂಕೆ, ಆಮೆ, ಕೃಷ್ಣಮೃಗ, ಹುಲಿ, ಸಿಂಹ ಸೇರಿದಂತೆ ಅನೇಕ ಪ್ರಾಣಿ-ಪಕ್ಷಿಗಳಿವೆ. ಪ್ರಾಣಿಗಳನ್ನು ಹೆಚ್ಚಿಸಲು ಕೇಂದ್ರ-ರಾಜ್ಯ ಸರ್ಕಾರಗಳ ಅನುಮತಿ ಪಡೆದು ಮೃಗಾಲಯವನ್ನು ಮತ್ತಷ್ಟು ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸತೀಶ ಜಾರಕಿಹೊಳಿ ಅವರು ಅರಣ್ಯ ಇಲಾಖೆ ಸಚಿವರಾಗಿದ್ದಾಗ ಪ್ರಾಣಿ ಸಂಗ್ರಹಾಲಯಕ್ಕೆ ಬಹಳಷ್ಟು ಒತ್ತು ನೀಡಿದ್ದರು. ಈಗ ಕ್ಯಾಂಟೀನ್‌, ಊಟದ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದಾರೆ. ಕಾಮಗಾರಿಯೂ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ವರ್ಷವಿಡೀ ಲಕ್ಷಾಂತರ ಪ್ರಾಣಿ ಪ್ರಿಯರು ಆಗಮಿಸುತ್ತಾರೆ. ಶನಿವಾರ-ಭಾನುವಾರ ಹಾಗೂ ರಜೆ ದಿನಗಳಲ್ಲಿ ದಿನಕ್ಕೆ 3 ಸಾವಿರ ಜನರು ಮೃಗಾಲಯಕ್ಕೆ ಆಗಮಿಸುತ್ತಿದ್ದಾರೆ. ವರ್ಷಕ್ಕೆ ಸರಾಸರಿ 2.5 ಲಕ್ಷಕ್ಕೂ ಅಧಿಕ ಜನರು ಭೇಟಿ ನೀಡುತ್ತಿದ್ದು, ಲಕ್ಷಾಂತರ ಹಣ ಸಂಗ್ರಹವಾಗುತ್ತಿದೆ. ಮಕ್ಕಳು ಸುರಕ್ಷೆತೆಗಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಯೋಜಿಸಲಾಗಿದೆ. ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಪ್ರವಾಸೋದ್ಯಮ ಇಲಾಖೆಯನ್ನು ಕೋರಲಾಗಿದೆ ಎಂದು ಮಾಹಿತಿ ನೀಡಿದರು.

ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಬೇಸಿಗೆಯ ರಜೆಗೆ ಆಗಮಿಸುವ ಪುಟ್ಟ ಮಕ್ಕಳನ್ನು ಆಕರ್ಷಿಸುವಲ್ಲಿ ವಿನೂತನ ಆಟಿಕೆ ಸಾಮಗ್ರಿ ಅಳವಡಿಸಿ, ವೀಕ್ಷಣೆಗೆ ಆಗಮಿಸಿದ ಪ್ರವಾಸಿಗರಿಗೆ ಯಾವುದೇ ತೊಂದರೆ ಆಗದಂತೆ ಅವಕಾಶ ಕಲ್ಪಿಸಿ, ಪ್ರಾಣಿ ಸಂಗ್ರಾಹಲಯ ಮತ್ತಷ್ಟು ಅಭಿವೃದ್ಧಿಯಾಗಲಿ. ಅದಕ್ಕೆ ಬೇಕಾದ ಅಗತ್ಯ ಕ್ರಮಗೊಳ್ಳಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಮರು ನಿರ್ಮಾಣದಿಂದ ಪ್ರಾಣಿ ಸಂಗ್ರಹಾಲಯಕ್ಕೆ ಆಗಮಿಸಲು ಪ್ರವಾಸಿಗರಿಗೆ ತೊಂದರೆ ಆಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು. ಸಂಸದೆ ಪ್ರಿಯಾಂಕ ಜಾರಕಿಹೊಳಿ ಅವರು ಸ್ಥಳದಲ್ಲಿ ಫೋನ್‌ ಮೂಲಕ ಅಧಿಕಾರಿ ಎಸಿಗೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಕೈಗೊಳ್ಳುವಂತೆ ತಾಕೀತು ಮಾಡಿದರು.

ಭೂತರಾಮನಟ್ಟಿ ವಲಯ ಅರಣ್ಯ ಅಧಿಕಾರಿ ಪವನ ಕರನಿಂಗ, ಉಪವಲಯ ಅಧಿಕಾರಿ ಜಿ.ಎಚ್. ಕುದರಿ, ಡಾ.ನಾಗೇಶ ಹೂಯಿಲಗೊಳ್ಳ, ಸಹಾಯಕ ಎಂಜಿನಿಯರಿಂಗ್ ಅಡಿವೆಪ್ಪ ನಾಸಿಪುಡಿ, ಮೃಗಾಲಯ ಶಿಕ್ಷಣ ಅಧಿಕಾರಿ ಪ್ರಜ್ವಲ ಕುಲಕರ್ಣಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ