ಕನ್ನಡಪ್ರಭ ವಾರ್ತೆ ಮಂಡ್ಯ
ಆಟೋ ಮೊಬೈಲ್ ಮತ್ತು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಯಿಂದ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಮೈಸೂರು ಮತ್ತು ಮಂಡ್ಯದ ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗವನ್ನರಸಿ ಬೆಂಗಳೂರು ಸೇರುವುದು ತಪ್ಪಲಿದೆ. ಆಟೋಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಎಂಜಿನಿಯರಿಂಗ್, ಡಿಪ್ಲೋಮಾ ಪದವೀಧರರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಯದುವೀರ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜ.18ರಂದು ಮದ್ದೂರಿನಲ್ಲಿ ಪ್ರಾಂತೀಯ ಸಮ್ಮೇಳನ
ಮದ್ದೂರು:ನಗರದ ಟಿ.ಬಿ.ವೃತ್ತದ ಎಂ.ಎಂ.ಪಾರ್ಟಿಹಾಲ್‌ನಲ್ಲಿ ಜ.18 ರಂದು ಅಸೋಷಿಯೇಷನ್ ಆಫ್ ಅಲಯನ್ಸ್ ಸಂಸ್ಥೆ ಇಂಟರ್‌ನ್ಯಾಷನಲ್ ವತಿಯಿಂದ ಆಹಾರ ಪರಿಕ್ರಮದಲ್ಲಿ ಆಯೋಗ್ಯ-ಆರೋಗ್ಯಾಭಿಲಾಸಿಗಳ ಸಮ್ಮಿಲನ ಘೋಷವಾಕ್ಯದೊಂದಿಗೆ ಪ್ರಾಂತೀಯ ಸಮ್ಮೇಳನ-ಪ್ರಾಂತ್ಯ-1ರ ಸಮಾರಂಭ ನಡಯೆಲಿದೆ.
ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಅಲಯನ್ಸ್ ಸಂಸ್ಥೆ ನಿರ್ದೇಶಕ ಡಾ.ನಾಗರಾಜು ವಿ.ಭೈರಿ, ಗ್ಯಾಸ್ಟ್ರೋ ಎಂಟ್ರೋಲಾಜಿ ತಜ್ಞ ಡಾ.ಟಿ.ಅಂಜನಪ್ಪ, ಅಲಯನ್ಸ್ ಸಂಸ್ಥೆ ರಾಜ್ಯಪಾಲ ಎಚ್.ಮಾದೇಗೌಡ, ಸೌತ್ ಮಲ್ಟಿಪಲ್‌ಕೌನ್ಸಿಲ್ ಅಧ್ಯಕ್ಷ ಕೆ.ಟಿ.ಹನುಮಂತು, 3ನೇ ಉಪರಾಜ್ಯಪಾಲ ಕೆ.ಆರ್.ಶಶಿಧರ್ ಈಚಗೆರೆ, 2ನೇ ಉಪರಾಜ್ಯಪಾಲ ಚಂದ್ರಶೇಖರ್, ಪ್ರಾಂತೀಯ ಅಧ್ಯಕ್ಷ ಟಿ.ನಾಗರಾಜು, ಧ್ವನಿ ಮಹಿಳಾ ಸಂಸ್ಥೆ ಅಧ್ಯಕ್ಷೆ ರಜನಿರಾಜ್, ಸಂಪುಟ ಕಾರ್ಯದರ್ಶಿ ಆರ್.ಮಹೇಶ್, ಪಿಆರ್‌ಒ ಡಾ.ರತ್ನಮ್ಮ, ಅಪ್ಪಾಜಿ, ರಕ್ಷಿತ್‌ರಾಜ್ ಸೇರಿದಂತೆ ಹಲವು ಪಾಲ್ಗೊಳ್ಳಲಿದ್ದಾರೆ.