ಕನ್ನಡಪ್ರಭ ವಾರ್ತೆ ಮೈಸೂರು
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನೋಬಾ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಹಲವು ಮರಗಳನ್ನು ತೆಗೆಯಬೇಕಾಗುತ್ತದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಾರದು ಎಂದರು.
ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಜನಪ್ರತಿನಿಧಿಗಳಿಗೂ ಈ ವಿಚಾರವಾಗಿ ಸರಿಯಾದ ಮಾಹಿತಿ ಇಲ್ಲ. ಆದರೂ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುತ್ತಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಫ್ಲೈ ಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ ಎಂದರು.ಎರಡೂ ಕಡೆ ಮೇಲ್ಸೇತುವೆ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ರಸ್ತೆಗಳ ಹಲವು ಕಡೆ ಮಣ್ಣಿನ ಪರೀಕ್ಷೆ ನಡೆಸಲಾಗಿದೆ. ಈ ಎರಡು ರಸ್ತೆಗಳು ಪಾರಂಪರಿಕಾ ರಸ್ತೆಗಳಾಗಿದ್ದೂ, ಅವುಗಳನ್ನು ಹಾಗೇಯೇ ಉಳಿಸಿಕೊಳ್ಳಬೇಕು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮೆಟ್ರೋ ವಿರೋಧವಿಲ್ಲ:
ಗ್ರೇಟರ್ ಮೈಸೂರು ನಿರ್ಮಾಣದ ವೇಳೆ ಸ್ಥಳೀಯರ ಅನುಕೂಲ ನೋಡಬೇಕು. ಗ್ರೇಟರ್ ಮೈಸೂರಿನಿಂದ ನಗರಕ್ಕೆ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಬಾರದು ಎಂದು ಅವರು ಎಚ್ಚರಿಸಿದರು.
ಕಬ್ಬಿಗೆ ವೈಜ್ಞಾನಿವಾಗಿ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಮನವಿಗೆ ಸ್ಪಂದಿಸಬೇಕು. ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿಂದಿನಿಂದಲೂ ಏನೇ ಆದರೂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೇ ಆರೋಪಿಸುತ್ತಿದ್ದರು. ಅದನ್ನು ಬಿಟ್ಟು ಅವರು ರೈತರ ಸಮಸ್ಯೆ ಬಗೆಹರಿಸಬೇಕು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮನ್ನು ದೇವರಾಜ ಅರಸು ಅವರಿಗೆ ಹೋಲಿಸಿಕೊಳ್ಳುತ್ತಾರೆ. ಅರಸು ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದರೂ ಅವರ ಪ್ರತಿಮೆಯಲ್ಲಿ ಆದ ತಪ್ಪನ್ನು ಕೂಡಲೇ ಸರಿಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಶೇ.10ರಷ್ಟು ಜನ ದೇಶದ ಸೇನೆ ನಿಭಾಯಿಸುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಸುಳ್ಳನ್ನು ಸತ್ಯ ಮಾಡಲು ಹೋಗುತ್ತಾರೆ. ಸುಳ್ಳು ಎಷ್ಟು ಬಾರಿ ಹೇಳಿದರು ಸುಳ್ಳೇ. ಅದು ಸತ್ಯ ಆಗುವುದಿಲ್ಲ. ಅವರ ಹೇಳಿಕೆ ಯಾವಾಗಲೂ ಇದೇ ರೀತಿ ಇರುತ್ತವೆ ಎಂದು ಟೀಕಿಸಿದರು.