ಕನ್ನಡಪ್ರಭ ವಾರ್ತೆ ಮಡಿಕೇರಿ
ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು.
ಹೆದ್ದಾರಿ ಸುರಕ್ಷತೆಗೆ ಒತ್ತು ನೀಡಬೇಕು. ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸಂಸದರು ಸೂಚಿಸಿದರು. ಸಾರ್ವಜನಿಕರ ಓಡಾಟ ಮತ್ತು ಸುರಕ್ಷತೆ ಅತೀ ಮುಖ್ಯವಾಗಿದೆ. ಇಲ್ಲಿನ 5 ಕುಟುಂಬಗಳ ಸುರಕ್ಷತೆಯೂ ಸಹ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದರು.ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರು ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ ತಡೆಗೋಡೆ ನಿರ್ಮಿಸಲಾಗಿದೆ. ತಡೆಗೋಡೆ ಸಮೀಪದಲ್ಲಿ 5 ಕುಟುಂಬಗಳಿದ್ದು, ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹೆದ್ದಾರಿ ಸುರಕ್ಷತೆ ಸಂಬಂಧಿಸಿದಂತೆ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷರಾದ ಪಿ. ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಸದಸ್ಯರಾದ ಸುಬ್ರಮಣಿ, ಸಬಿತಾ, ತಹಸೀಲ್ದಾರ್ ಶ್ರೀಧರ, ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್, ಪೌರಾಯುಕ್ತರಾದ ರಮೇಶ್, ಸ್ಥಳೀಯರು ಇತರರು ಇದ್ದರು.ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ರಾಜಸೀಟು ಉದ್ಯಾನವನಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಇಲ್ಲಿನ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.