ಸದನದಿಂದ ಸಂಸದರು ಹೊರಕ್ಕೆ, ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಎಂ.ಬಿ. ಪಾಟೀಲ

KannadaprabhaNewsNetwork |  
Published : Dec 22, 2023, 01:30 AM IST
ಫೋಟೋ21ಕೆಎಸಟಿ1:  ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಭೇಡಿ ನೀಡಿದ ಸಚಿವ ಎಂ ಬಿ ಪಾಟೀಲ ಅವರನ್ನು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಸನ್ಮಾನಿಸಿದರು. | Kannada Prabha

ಸಾರಾಂಶ

ಸಂಸದರದ್ದು ತಪ್ಪು ಇದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಅವರನ್ನು ಸದನದಿಂದ ಹೊರಗೆ ಹಾಕಿರುವುದು ಇದೇ ಮೊದಲು. ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ

ಕುಷ್ಟಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಿಂದ ಸಂಸದರನ್ನು ಹೊರಗೆ ಹಾಕುವುದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದಂತಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು.ತಾಲೂಕಿನ ತಾವರಗೇರಾ ಪಟ್ಟಣದ ಬುದ್ಧ ವಿಹಾರದ ಹೆಲಿಪ್ಯಾಡ್‌ನಲ್ಲಿ ಇಳಿದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರದ್ದು ತಪ್ಪು ಇದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಅವರನ್ನು ಸದನದಿಂದ ಹೊರಗೆ ಹಾಕಿರುವುದು ಇದೇ ಮೊದಲು. ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಎಂದರು.ತಾಲೂಕಿನ ಕ್ಯಾದಗುಂಪಿಯ ಕೈಗಾರಿಕೆ ಪ್ರದೇಶದಲ್ಲಿ ಅರ್ಹ ಉದ್ದಿಮೆದಾರರು ಕೈಗಾರಿಕೆ ಸ್ಥಾಪನೆಗೆ ಮುಂದಾದಲ್ಲಿ ಅಂಥವರಿಗೆ ಕೈಗಾರಿಕೆ ಸ್ಥಾಪಿಸಲು ಅನುಮತಿ ಕೊಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಖಾನೆಗಳು ನಡೆಯಬೇಕು. ಅದರಿಂದ ಉದ್ಯೋಗಗಳು ಸೃಷ್ಟಿಯಾಗುತ್ತವೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಎಂದರು.ಸದ್ಯ ಹಳೆ ಸರ್ಕಾರ ಮಂಡಿಸಿದ ಬಜೆಟ್‌ನ್ನು ನಿರ್ವಹಣೆ ಮಾಡಿಕೊಂಡು ಹೋಗುತ್ತಿದ್ದೇವೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!