ಜಿಲ್ಲಾಸ್ಪತ್ರೆಯಲ್ಲಿ ಶೀಘ್ರದಲ್ಲೇ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಲಭ್ಯ

KannadaprabhaNewsNetwork |  
Published : Jul 06, 2026, 02:15 AM IST
5ಎಚ್‌ವಿಆರ್‌3 | Kannada Prabha

ಸಾರಾಂಶ

ಇಲ್ಲಿಯ ಜಿಲ್ಲಾಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗುತ್ತಿರುವ ಎಂಆರ್‌ಐ ಸ್ಕ್ಯಾನರ್ ಯಂತ್ರವು ಇನ್ನು ಕೆಲವೇ ದಿನಗಳಲ್ಲಿ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹೇಳಿದರು.

ಹಾವೇರಿ: ಇಲ್ಲಿಯ ಜಿಲ್ಲಾಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗುತ್ತಿರುವ ಎಂಆರ್‌ಐ ಸ್ಕ್ಯಾನರ್ ಯಂತ್ರವು ಇನ್ನು ಕೆಲವೇ ದಿನಗಳಲ್ಲಿ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹೇಳಿದರು.

ಜಿಲ್ಲಾಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈಗಾಗಲೇ ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರ ಅಳವಡಿಕೆ ಕಾರ್ಯ ಬಹುತೇಕ ಪೂರ್ತಿಗೊಂಡಿದೆ. ಇನ್ನು ಮುಂದೆ ಬೇರೆ ಕಡೆ ಹೋಗುವ ಅಗತ್ಯವಿರುವುದಿಲ್ಲ. ಶೀಘ್ರದಲ್ಲಿ ಸಾರ್ವಜನಿಕ ಸೇವೆಗೆ ಅರ್ಪಿಸಲಾಗುವುದು ಎಂದು ಹೇಳಿದರು.

ಬಳಿಕ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದ ಅವರು, ರೋಗಿಗಳ ಕುಂದುಕೊರತೆ ಆಲಿಸಿದರು. ಎಲ್ಲರಿಗೂ ಸೂಕ್ತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಿ, ಬಡ ಹಾಗೂ ಸಾಮಾನ್ಯ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ಉಚಿತವಾಗಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ ನೀಡಿದರು. ಈ ವೇಳೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಆಸ್ಪತ್ರೆಯ ಮುಖ್ಯಸ್ಥರು, ವೈದ್ಯಾಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೊಮ್ಮಾಯಿ ಆರೋಪ ಹಸಿ ಸುಳ್ಳು, ಬಹಿರಂಗ ಕ್ಷಮೆ ಕೇಳಲಿ: ಎಚ್‌.ಕೆ. ಪಾಟೀಲ
ಹೈಟೆಕ್ ಶೌಚಾಲಯ ಅಪೂರ್ಣ