ಕನ್ನಡಪ್ರಭ ವಾರ್ತೆ ಬೆಳಗಾವಿ
ಶಿವಯ್ಯ ಪೂಜಾರಿ, ಮಿತೇಶ್ ಬಡಿಗೇರ, ಮೋನಪ್ಪ ಪಾಟೀಲ, ಸಂಪತ್ ಕಡೋಲ್ಕರ ಬಂಧಿತ ಆರೋಪಿಗಳು. ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಕಾರಿನಿಂದ ಇಳಿದ ತಕ್ಷಣವೇ ಚಾಲಕ ಬಸವಂತ ಕಡೋಲ್ಕರ್ ಮೇಲೆ ಹಾಡಹಗಲೇ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿ, ಬೈಕ್ ಮೇಲೆ ಪರಾರಿಯಾಗಿದ್ದರು. ಈ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಗಂಭೀರ ಗಾಯಗೊಂಡಿದ್ದ ಚಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ನಡೆದ 24 ಗಂಟೆ ಅವಧಿಯಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ತನಿಖೆ ಬಳಿಕವೇ ನಿಜವಾದ ಕಾರಣ ಗೊತ್ತಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದರು.
ಚಾಲಕ ಬಸವಂತ ಸ್ನೇಹಿತ ಮದನ ಎಂಬುವರು ನೀಡಿದ ದೂರಿನ ಮೇರೆಗೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.----------