ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮ

KannadaprabhaNewsNetwork |  
Published : May 19, 2026, 01:30 AM IST
೧೮ಕೆಎಂಎನ್‌ಡಿ-೬ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ  ಮಂಡ್ಯದ ಶ್ರೀ ವಿದ್ಯಾಗಣಪತಿ ದೇಗುಲದಲ್ಲಿ ಜೆಡಿಎಸ್ ಮುಖಂಡ ಬಿ.ಆ.ರಾಮಚಂದ್ರು ಮೃತ್ಯುಂಜಯ ಹೋಮ ನಡೆಸಿದರು. | Kannada Prabha

ಸಾರಾಂಶ

ಎಚ್.ಡಿ.ದೇವೇಗೌಡ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಜೂ.೨೫ಕ್ಕೆ ಮುಕ್ತಾಯವಾಗುವುದರಿಂದ ಮತ್ತೊಮ್ಮೆ ರಾಜ್ಯಸಭೆ ಪ್ರವೇಶಿಸಲು ಮೈತ್ರಿ ಪಕ್ಷ ಅವರಿಗೆ ಅವಕಾಶ ಕೊಟ್ಟು ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಕೊಡುಗೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ಕಲ್ಪಿಸಿಕೊಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರವರ ೯೪ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ವತಿಯಿಂದ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಮುಖಂಡ ಬಿ.ಆರ್.ರಾಮಚಂದ್ರ ಅವರ ನೇತೃತ್ವದಲ್ಲಿ ವಿದ್ಯಾನಗರದ ಶ್ರೀವಿದ್ಯಾಗಣಪತಿ ದೇವಸ್ಥಾನದಲ್ಲಿ ಎಚ್.ಡಿ.ದೇವೇಗೌಡರ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮ, ನವಗ್ರಹ ಶಾಂತಿ ಹೋಮ ನಡೆಸಲಾಯಿತು.

ಬಿ.ಆರ್.ರಾಮಚಂದ್ರು ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗಡರ ಆರೋಗ್ಯ ವೃದ್ಧಿಗಾಗಿ ಹೋಮ ನಡೆಸಲಾಗಿದೆ. ದೇವರು ಅವರಿಗೆ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ. ರಾಷ್ಟ್ರದ ಜನರ ಆಶೀರ್ವಾದ ದೇವೇಗೌಡರ ಮೇಲಿರಲಿ ಎಂದು ಪ್ರಾರ್ಥಿಸಿದರು.

ಎಚ್.ಡಿ.ದೇವೇಗೌಡ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಜೂ.೨೫ಕ್ಕೆ ಮುಕ್ತಾಯವಾಗುವುದರಿಂದ ಮತ್ತೊಮ್ಮೆ ರಾಜ್ಯಸಭೆ ಪ್ರವೇಶಿಸಲು ಮೈತ್ರಿ ಪಕ್ಷ ಅವರಿಗೆ ಅವಕಾಶ ಕೊಟ್ಟು ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಕೊಡುಗೆಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.

ಜೆಡಿಎಸ್ ಜಿಲ್ಲಾದ್ಯಕ್ಷ ಡಿ.ರಮೇಶ್, ನಗರ ಘಟಕದ ಅಧ್ಯಕ್ಷ ಬೋರೇಗೌಡ, ನಗರಸಭೆ ಮಾಜಿ ಅಧ್ಯಕ್ಷ ನಾಗೇಶ್, ಸಾತನೂರು ಜಯರಾಮ್, ಮಂಜುನಾಥ್ ಸೇರಿದಂತೆ ಹಲವರು ಇದ್ದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹುಟ್ಟುಹಬ್ಬ: ಅನ್ನಸಂತರ್ಪಣೆ

ಹಲಗೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ಅವರಣದಲ್ಲಿ ಹೊರ ರೋಗಿಗಳು ಮತ್ತು ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ 94ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳು, ಜೆಡಿಎಸ್, ಬಿಜೆಪಿ ಮುಖಂಡರು ಆಚರಿಸಿದರು.ಬಿಜೆಪಿ ಮುಖಂಡ ರವಿ ಮೋದಿ ಮಾತನಾಡಿ, ಹಿರಿಯ ಮುತ್ಸದ್ದಿ ಎಚ್.ಡಿ.ದೇವೇಗೌಡ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಹೋರಾಟಗಳು ನಾಡಿನ ಇತಿಹಾಸದ ಪುಟಗಳಲ್ಲಿ ಮಹತ್ವದ ಹೆಜ್ಜೆ ಗುರುತುಗಳಾಗಿವೆ ಎಂದರು.

ವಯಸ್ಸನ್ನು ಲೆಕ್ಕಿಸದೇ ರಾಜಕೀಯವಾಗಿ ಅವರಲ್ಲಿರುವ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದರೇ ತಪ್ಪಾಗಲಾರದು. ಗ್ರಾಮೀಣ ಪ್ರದೇಶದ ಜನರ ಬಗೆಗಿನ ಅವರ ನೈಜ ಕಾಳಜಿಯ ಕೊಡುಗೆಗಳು ಪ್ರಶಂಸನೀಯ. ಅವರ ಸೇವೆ ದೇಶಕ್ಕೆ ಮತ್ತಷ್ಟು ವರ್ಷ ದಕ್ಕಲಿ ಎಂದರು.ಈ ವೇಳೆ ಜೆಡಿಎಸ್ ಮುಖಂಡರಾದ ತಮ್ಮಣ್ಣಗೌಡ, ಮೋದಿ ರವಿ, ಎಲ್.ಸಿ.ಪುಟ್ಟಸ್ವಾಮಿಗೌಡ, ಎ.ಎಸ್. ದೇವರಾಜು, ಹರೀಶ್, ಸುರೇಶ್, ಎನ್.ಕೆ.ಕುಮಾರ್ ಮತ್ತು ಲಯನ್ಸ್ ಕ್ಲಬ್ ಅಧ್ಯಕ್ಷ ಮನೋಹರ್ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್‌ಡಿಡಿ ಹೆಸರಲ್ಲಿ ಬೇಲೂರು ಚನ್ನಕೇಶವ ಸ್ವಾಮಿಗೆ ವಿಶೇಷ ಪೂಜೆ
ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಸಂಭ್ರಮ