ಆರ್ ಪಿ ಎಲ್ ಘಟಕ ಸ್ಫೋಟ: ರಾಜ್ಯ ಸರಕಾರದಿಂದಲೂ ತನಿಖೆ ಚಿಂತನೆ; ಯು.ಟಿ. ಖಾದರ್

KannadaprabhaNewsNetwork |  
Published : Oct 01, 2026, 02:45 AM IST
 | Kannada Prabha

ಸಾರಾಂಶ

ಎಂ ಅರ್ ಪಿ ಎಲ್ ಘಟಕ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾತ್ರವಲ್ಲ, ರಾಜ್ಯ ಸರ್ಕಾರದಿಂದಲೂ ತನಿಖೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಮಂಗಳೂರು: ಎಂ ಅರ್ ಪಿ ಎಲ್ ಘಟಕ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾತ್ರವಲ್ಲ, ರಾಜ್ಯ ಸರ್ಕಾರದಿಂದಲೂ ತನಿಖೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ ಎಂ ಆರ್ ಪಿ ಎಲ್ ಘಟಕಕ್ಕೆ ಹಾಗೂ ಮೃತನ ಕುಟುಂಬಸ್ಥರ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಅತ್ಯಾಧುನಿಕ ನಿರ್ವಹಣಾ ವ್ಯವಸ್ಥೆ ಹೊಂದಿರುವ ಎಂ ಆರ್ ಪಿ ಎಲ್ ನಂತಹ ಸಂಸ್ಥೆಗಳಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ನಡೆದಂತೆ ಸಾಕಷ್ಟು ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈ ಫೋಟೋ ಘಟನೆಯಲ್ಲಿ ಮೃತಪಟ್ಟವನ ಕುಟುಂಬಕ್ಕೆ ಮಾತ್ರವಲ್ಲ ಸಂತ್ರಸ್ತ ಗಾಯಾಳುಗಳಿಗೆ ಚಿಕಿತ್ಸೆಗೆ ಎಂ ಆರ್ ಪಿ ಎಲ್ ಪರಿಹಾರ ಹಾಗೂ ವೆಚ್ಚ ಭರಿಸುವ ಬಗ್ಗೆ ಸೂಚನೆ ನೀಡಲಾಗಿದೆ. ಅಲ್ಲದೆ ಹಾನಿಗೊಂಡ ಸಂತ್ರಸ್ತರಿಗೂ ಪರಿಹಾರ ನೀಡುವ ಬಗ್ಗೆ ಮಾತುಕತೆ ನಡೆಸಲಾಗುವುದು. ಈ ಘಟನೆಗೆ ಕಾರಣ ಏನು ಎಂಬ ಬಗ್ಗೆ ಕೇಂದ್ರ ಅಧೀನದ ಎಂ ಆರ್ ಪಿ ಎಲ್ ಉನ್ನತ ಅಧಿಕಾರಿಗಳು ಸಹಜವಾಗಿ ತನಿಖೆ ನಡೆಸಲಿದ್ದಾರೆ, ರಾಜ್ಯ ಸರ್ಕಾರ ಕೂಡ ತನಿಖೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದರು.

ಎಂ ಆರ್ ಪಿ ಎಲ್ ಸುತ್ತಮುತ್ತಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವ ಖಾದರ್, ಈಗಾಗಲೇ ಹಸಿರು ವಲಯಕ್ಕೆ 27 ಎಕರೆ ಭೂಮಿ ವಶಪಡಿಸುವ ವಿಚಾರ ಹಸಿರು ನ್ಯಾಯಾಧೀಕರಣದ ಮುಂದೆ ಇದೆ ಹಾಗಾಗಿ ಈ ಭೂಮಿಯನ್ನು ಸ್ವಾಧೀನ ಪಡಿಸಿದರೆ ಕಂಪನಿಯ ಈ ವಲಯದ ವ್ಯಾಪ್ತಿಗೆ ಒಳಪಡುವ ಜನರನ್ನು ಅನಿವಾರ್ಯವಾಗಿ ಸ್ಥಳಾಂತರಿಸಬೇಕಾಗುತ್ತದೆ ಈ ಬಗ್ಗೆ ಕಂಪನಿ ಜೊತೆ ಮಾತುಕತೆ ನಡೆಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಮತ್ತು ಎಲೆಸುರುಳಿ ಹುಳುಗಳ ಬಾಧೆ ಹಾಗೂ ಪರಿಹಾರ
ಸಾರ್ವಜನಿಕ ಜಾಗೃತಿ ಮೂಡಿಸಿದ ಪೋಲೀಸ್ ಸಿಬ್ಬಂದಿ