ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಅಲಂಗಾರ್ ಚರ್ಚ್ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಕೊಂಬೆ ಮುರಿದು ಬಿದ್ದು ಕಾರಿಗೆ ಹಾನಿಯಾದರೂ ವಿಶುಕುಮಾರ್ ಶೆಟ್ಟಿ ಸುದೈವವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಚಂದ್ರಾಪುರದಲ್ಲಿ ನಾರಾಯಣ, ಶಾಂತಿ ರೋಡ್ರಿಗಸ್, ಸರಸ್ವತಿ ಶೆಟ್ಟಿಗಾರ್, ಜುಲಿಯಾನ ಡಿಸೋಜ, ಆಶ್ರಯ ಕಾಲನಿಯಲ್ಲಿ ಸತೀಶ್ ಸಾಲ್ಯಾನ್ ಮತ್ತೊಂದು ಮನೆಗೆ ಭಾಗಶಃ ಹಾನಿಯಾಗಿದೆ.ಅಲಂಗಾರ್ ಜಂಕ್ಷನ್:
ಅಲಂಗಾರ್ ರಿಕ್ಷಾ ಜಂಕ್ಷನ್‌ನಲ್ಲಿ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಅಲ್ಲಿ ಆ ವೇಳೆಗೆ ಯಾವುದೇ ವಾಹನಗಳಿಲ್ಲದಿದ್ದ ಕಾರಣ ಸಂಭಾವ್ಯ ಅಪಾಯ ತಪ್ಪಿದೆ.ಪಡುಕೊಣಾಜೆ ವ್ಯಾಪ್ತಿಯಲ್ಲಿ ರಬ್ಬರ್ ಪ್ಲಾಂಟೇಶನ್‌ನಲ್ಲಿ ಹಲವು ಮರಗಳು ಉರುಳಿ ಬಿದ್ದಿವೆ. ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ವಾರ್ಡ್ ಸದಸ್ಯ ಪಿ.ಕೆ. ಥಾಮಸ್ , ಕಂದಾಯ, ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮೂಡುಬಿದಿರೆ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯರಾಜ್ , ಬಿಜೆಪಿ ಪ್ರಮುಖ ರಂಜಿತ್ ಪೂಜಾರಿ ಘಟನೆಯ ಹಿನ್ನೆಲೆಯಲ್ಲಿ ಭೇಟಿ ನೀಡಿ ಸಂತ್ರಸ್ತರ ಜತೆ ಸ್ಪಂದಿಸಿದ್ದಾರೆ.