ಮುಡಾ ವಿಚಾರ ಉಪ ಚುನಾವಣೆ ಮೇಲೆ ಪ್ರಭಾವ ಬೀರದು: ಶಾಸಕ ಶರತ್ ಬಚ್ಚೇಗೌಡ

KannadaprabhaNewsNetwork |  
Published : Oct 19, 2024, 12:18 AM IST
ಫೋಟೋ : 17 ಹೆಚ್‌ಎಸ್‌ಕೆ 2 ಹೊಸಕೋಟೆ ನಗರದಲ್ಲಿ ಶಾಸಕ ಶರತ್ ಬಚ್ಚೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಮೂರು ವಿಧಾನಸಭಾ P್ವ್ಷÃತ್ರಗಳ ಉಪ ಚುನಾವಣೆಯ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. | Kannada Prabha

ಸಾರಾಂಶ

ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

-ಬಿಜೆಪಿಯದ್ದು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ: ಟೀಕೆಕನ್ನಡಪ್ರಭ ವಾರ್ತೆ ಹೊಸಕೋಟೆ

ಮುಡಾ ಹಗರಣ ಹೆಸರಲ್ಲಿ ಬಿಜೆಪಿಯವರು ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆಯೇ ಹೊರತು ಯಾವುದೇ ರೀತಿಯ ಗಂಭೀರವಾದ ಆರೋಪಗಳಿಲ್ಲ. ಮುಡಾ ಅಥವಾ ವಾಲ್ಮೀಕಿ ಹಗರಣ ಎನ್ನುತ್ತಿರುವ ವಿಚಾರ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಯಾವುದೇ ಪ್ರಭಾವ ಬೀರಲ್ಲ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಪ್ಪಿಲ್ಲದಿದ್ದರೂ ಮುಡಾ ನಿವೇಶನದ ವಿಚಾರ ಕೆದಕಿ ಬಿಜೆಪಿಯವರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ. ಆದರೆ ಡಿಸೆಂಬರ್‌ನಲ್ಲಿ ತನಿಖೆ ಮುಕ್ತಾಯಗೊಳ್ಳಲಿದ್ದು ಸಿದ್ದರಾಮಯ್ಯ ಆರೋಪ ಮುಕ್ತರಾಗುತ್ತಾರೆ ಎಂದು ಹೇಳಿದರು.

ಮಾಜಿ ಸಚಿವ ನಾಗೇಂದ್ರ ಅವರು ಜೈಲಿನಿಂದ ಬಿಡುಗಡೆಯಾಗಿದ್ದು ಇಡಿ ಅಧಿಕಾರಿಗಳು ವಾಲ್ಮೀಕಿ ಪ್ರಕರಣದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಹೆಸರು ಹೇಳುವಂತೆ ಒತ್ತಡ ಹಾಕಿರುವ ಬಗ್ಗೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿ ಐಡಿ, ಇಡಿ ಸೇರಿದಂತೆ ರಾಜಭವನ, ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆದು ಪಂಚ ಗ್ಯಾರಂಟಿ ಕೊಡುವ ಮೂಲಕ ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರ ಆಶೀರ್ವಾದ ಸದಾಕಾಲ ಇರುತ್ತದೆ ಎಂದರು.

ನ. 13ರಂದು ನಡೆಯಲಿರುವ ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮುಡಾ ಹಾಗೂ ವಾಲ್ಮೀಕಿ ಪ್ರಕರಣ ಯಾವುದೇ ಪ್ರಭಾವ ಬೀರಲ್ಲ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಶಾಸಕ ಶರತ್‌ ಬಚ್ಚೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು