ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ : ಹಿಂದುಳಿದ ಜಾತಿಗಳ ಪ್ರತಿಭಟನೆ

KannadaprabhaNewsNetwork |  
Published : Aug 18, 2024, 01:52 AM ISTUpdated : Aug 18, 2024, 12:41 PM IST
ಚಿತ್ರದುರ್ಗ ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ಮುಡಾ ಹಗರಣಕ್ಕೆಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಶನಿವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

 ಚಿತ್ರದುರ್ಗ : ಮುಡಾ ಹಗರಣಕ್ಕೆಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಹಿಂದುಳಿದ ಜಾತಿಗಳ ಒಕ್ಕೂಟದಿಂದ ಶನಿವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.

ರಾಜ್ಯಪಾಲರು ಅನುಮತಿ ನೀಡಿದ ಸಂಗತಿ ಪ್ರಚಾರವಾಗುತ್ತಿದ್ದಂತೆ, ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪ್ರಮುಖ ಕಾರ್ಯಕರ್ತರು ಗೋ ಬ್ಯಾಕ್ ರಾಜ್ಯಪಾಲ ಎಂದು ಘೋಷಣೆ ಕೂಗಿದರು. ಟೈರ್ ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿಕ ಚಕಮಕಿ ನಡೆಯಿತು. 

ಅಂತಿಮವಾಗಿ ಪೊಲೀಸರು ಟೈರ್ ಗೆ ಬೆಂಕಿ ಹಚ್ಚಲು ಅವಕಾಶ ಮಾಡಿಕೊಡಲಿಲ್ಲ.ಕೇಂದ್ರದ ಅಣತಿಯಂತೆ ಕಾರ್ಯನಿರ್ವಹಿಸುತ್ತಿರುವ ರಾಜ್ಯಪಾಲರು, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋಗಿ ಹಾಗೂ ಅಮಿತ್ ಶಾ ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ ಈ ರೀತಿ ರಾಜ್ಯಪಾಲರ ಹುದ್ದೆ ದುರುಪಯೋಗವಾಗಿದ್ದಿಲ್ಲ. ಮೋದಿ ಪ್ರಧಾನಿಯಾದ ನಂತರ ಸಾಂವಿಧಾನಿಕ ಹುದ್ದೆಗಳು ದ್ವೇಷಕ್ಕೆ ಬಳಕೆಯಾಗುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದರ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ. ರಾಜ್ಯವನ್ನು ಹಸಿವು ಮಕ್ತವನ್ನಾಗಿ ಮಾಡಲು ಹೊರಟಿರುವುದು ಕೇಂದ್ರ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ. ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.

ರಾಜ್ಯಪಾಲರ ನಡೆಯನ್ನು ಇಡೀ ಕರ್ನಾಟಕದ ಜನತೆ ನೋಡುತ್ತಿದ್ದಾರೆ. ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಸಾಂಕೇತಿಕ ಪ್ರತಿಭಟನೆ ಮೂಲಕ ತಕ್ಷಣ ಪ್ರತಿಕ್ರಿಯಿಸಲಾಗಿದೆ. ಮುಂದೆ ರಾಜ್ಯವ್ಯಾಪಿ ಆಂದೋಲನ ನಡೆಸಲು ಚಿಂತಿಸಲಾಗಿದೆ. ರಾಜ್ಯಪಾಲರು ಪ್ರಜ್ಞಾವಂತರಾಗಿ ನಡೆದುಕೊಳ್ಳದೆ ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ. ಹಾಗಾಗಿ ಅವರು ಕರ್ನಾಟಕದಿಂದ ವಾಪಾಸ್ಸು ಹೋಗಬೇಕೆಂದು ಆಗ್ರಹಿಸಿದರು.ಈ ವೇಳೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ. ಜಗದೀಶ್, ಜಿಲ್ಲಾಧ್ಯಕ್ಷ ಸಿ.ಟಿ. ಕೃಷ್ಣಮೂರ್ತಿ, ನಗರಸಭೆ ಮಾಜಿ ಸದಸ್ಯ ಎಚ್. ಮಂಜಪ್ಪ, ಡಿ.ಎನ್. ಮೈಲಾರಪ್ಪ, ಸಂಪತ್, ಎನ್.ಡಿ. ಕುಮಾರ್, ಎಸ್.ಎನ್. ರವಿಕುಮಾರ್, ಸೈಯದ್ ಖುದ್ದೂಸ್, ಮಾಳೇಶ್, ರಾಜಣ್ಣ, ಪ್ರಕಾಶ್‍ರಾಮನಾಯ್ಕ ಪ್ರತಿಭಟನೆ ನೇತೃತ್ವ ವಹಿಸಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೆಸ್ಸೆಸ್ಸನ್ನು ದೆವ್ವಕ್ಕೆ ಹೋಲಿಸಿದ ಪ್ರಿಯಾಂಕ್‌
ಸಿಲಿಕಾನ್‌ ಸಿಟಿಯಲ್ಲಿ ಮಹಾಶಿವರಾತ್ರಿ ಸಂಭ್ರಮ