ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್‌ ಹಗರಣ: ಲೋಕಾಕ್ಕೆ ಮಹತ್ವದ ದಾಖಲೆ

KannadaprabhaNewsNetwork |  
Published : Aug 01, 2024, 02:06 AM ISTUpdated : Aug 01, 2024, 12:46 PM IST
Siddaramaiah

ಸಾರಾಂಶ

ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್‌ ಹಗರಣಕ್ಕೆ ಸಂಬಂಧಿಸಿದ್ದಂತೆ ಮತ್ತಷ್ಟು ಮಹತ್ವದ ದಾಖಲೆ ಸಿಕ್ಕಿದೆ ಎಂದು ಬಿಜೆಪಿಯ ಎನ್‌.ಆರ್‌.ರಮೇಶ್‌ ಹೇಳಿದ್ದಾರೆ.

  ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬಸ್ಥರು ಭಾಗಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಬದಲಿ ನಿವೇಶನ ಹಂಚಿಕೆ ಬೃಹತ್‌ ಭೂಹಗರಣ ಸಂಬಂಧ 25 ಪುಟಗಳ ಮಹತ್ವದ ದಾಖಲೆಗಳನ್ನು ಲೋಕಾಯುಕ್ತರಿಗೆ ನೀಡಲಾಗಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ.

ಮುಡಾದಲ್ಲಿ ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿ ಸರ್ಕಾರಕ್ಕೆ ₹60 ಕೋಟಿ ವಂಚನೆ ಮಾಡಿರುವ ಹಗರಣ ಸಂಬಂಧ ಜು.20ರಂದು ಸುಮಾರು 400 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅವರ ಕುಟುಬಂಸ್ಥರು ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದೂರು ನೀಡಲಾಗಿದೆ. ಈಗ ಹಗರಣ ಸಂಬಂಧ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳು ತಮಗೆ ದೊರೆತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಲೋಕಾಯುಕ್ಕೆ ನೀಡಲಾಗಿದೆ ಎಂದಿದ್ದಾರೆ.

ಮುಡಾ 1997-98ರ ಅವಧಿಯಲ್ಲಿ ಎಲ್‌ ಆ್ಯಂಡ್‌ ಟಿ ಸಂಸ್ಥೆಯ ಮುಖಾಂತರ ರಸ್ತೆ ಡಾಂಬರೀಕರಣ, ಪಾದಾಚಾರಿ ಮಾರ್ಗಗಳು, ಚರಂಡಿಗಳು, ಕುಡಿಯುವ ನೀರಿನ ಕೊಳವೆಗಳು, ಒಳಚರಂಡಿ ಕೊಳವೆಗಳು ಹಾಗೂ ಬಿದಿ ದೀಪಗಳನ್ನು ಒಳಗೊಂಡಂತೆ ದೇವನೂರು 3ನೇ ಹಂತದ ಬಡಾವಣೆಯನ್ನು ಸಂಪೂರ್ಣ ಅಭಿವೃದ್ಧಿಪಡಿಸಿತ್ತು. ಬಳಿಕ ಅರ್ಜಿದಾರರಿಗೆ ನಿವೇಶನಗಳನ್ನು ಹಂಚಿತ್ತು. ಬಳಿಕ ಮೂರ್ನಾಲ್ಕು ವರ್ಷಗಳಲ್ಲಿ ಆ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ಎಲೆ ಎತ್ತಿದ್ದವು ಎಂದು ತಿಳಿಸಿದ್ದಾರೆ.

ಬಡಾವಣೆಯಲ್ಲಿ ಭೂ ಪರಿವರ್ತನೆಗೆ ಅನುಮತಿ:

ಆದರೆ, ಅಭಿವೃದ್ಧಿಗೊಂಡಿದ್ದ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು ಭೂ ಪರಿವರ್ತನೆ ಮಾಡಿ ಕೊಡುವಂತೆ 2004ರ ಡಿ.1ರಂದು ಸಲ್ಲಿಸಿದ್ದ ಅರ್ಜಿ ಸಲ್ಲಿಸಲಾಗಿತ್ತು. ಅಂದಿನ ಜಿಲ್ಲಾಧಿಕಾರಿಗಳು ತಾಲೂಕು ತಹಸೀಲ್ದಾರ್‌ ವರದಿ ಆಧರಿಸಿ 2005 ಜೂ.17ರಂದು ಖುದ್ದು ಸ್ಥಳ ಪರಿಶೀಲಿಸಿ ಮೈಸೂರು ತಾಲೂಕು, ಕಸಬಾ ಹೋಬಳಿ ಕೆಸರಿ ಗ್ರಾಮದ ಸರ್ವೆ ನಂಬರ್ 464ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ ಎಂದು ಸ್ಥಳ ತನಿಖಾ ಟಿಪ್ಪಣಿಯಲ್ಲಿ ಲಿಖಿತವಾಗಿ ತಿಳಿಸಿದ್ದಾರೆ.

ಅಭಿವೃದ್ಧಿಗೊಂಡ ಬಡಾವಣೆಯಲ್ಲಿ ಕೃಷಿ ಭೂಮಿ ಎಲ್ಲಿ?

ಏಳೆಂಟು ವರ್ಷಗಳ ಹಿಂದೆಯೇ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದ್ದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ವ್ಯವಸಾಯ ಜಮೀನು ಇರಲು ಹೇಗೆ ಸಾಧ್ಯ? 2004-2006ರ ಅವಧಿಯಲ್ಲಿ ಧರ್ಮಸಿಂಗ್‌ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಿದ್ದರಾಮಯ್ಯರ ರಾಜಕೀಯ ಪ್ರಭಾವ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಅಂದಿನ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳು ಈ ರೀತಿಯ ಹಾಸ್ಯಾಸ್ಪದ ಮತ್ತು ಕಾನೂನುಬಾಹಿರವಾದ ಭೂ ಪರಿವರ್ತನೆ ಕಾರ್ಯಕ್ಕೆ ಅನುಮೋದನೆ ನೀಡಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.ನ್ಯಾಯಾಲಯದಲ್ಲಿ ₹1.50 ಕೋಟಿ ಠೇವಣಿ

ಜಮೀನಿನ ಸಂಬಂಧ ದೇವನೂರು 3ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು ಸ್ವಾಧೀನಪಡಿಸಿಕೊಂಡಿದ್ದ ಅಷ್ಟೂ ಜಮೀನುಗಳ ಮಾಲೀಕರಿಗೆ ಮುಡಾದ ಆಯುಕ್ತರು, ಭೂಸ್ವಾಧೀನಾಧಿಕಾರಿ ಹಾಗೂ ಮುಖ್ಯ ಲೆಕ್ಕಾಧಿಕಾರಿ ಮೈಸೂರಿನ ಪ್ರಧಾನ ಸಿವಿಲ್‌ ನ್ಯಾಯಾಲಯದಲ್ಲಿ ಒಟ್ಟು ₹1.50 ಕೋಟಿ ಸಂಪುರ್ಣ ಪರಿಹಾರಧನವನ್ನು ಠೇವಣಿ ಇರಿಸಿದ್ದಾರೆ. ಈ ಎಲ್ಲದರ ಸಂಬಂಧ ಮಹತ್ವದ 25 ಪುಟಗಳ ದಾಖಲೆಗಳನ್ನು ಲೋಕಾಯುಕ್ತರಿಗೆ ನೀಡಲಾಗಿದೆ ಎಂದು ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ