ಮುಡಾ, ವಾಲ್ಮೀಕಿ ಹಗರಣ ಕಾಂಗ್ರೆಸ್‌ ಸರ್ಕಾರದ ದೊಡ್ಡ ಸಾಧನೆ: ನಳಿನ್‌ ಕುಮಾರ್‌

KannadaprabhaNewsNetwork |  
Published : Oct 20, 2024, 01:54 AM ISTUpdated : Oct 20, 2024, 01:55 AM IST
ಫೋಟೋ: ೧೯ಪಿಟಿಆರ್-ನಳಿನ್ ಪ್ರೆಸ್ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಗ್ರಾಮಮಟ್ಟದಿಂದ ಆರಂಭಗೊಂಡು ವಿಧಾನಸಭಾ ಕಚೇರಿ ತನಕ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಕೇವಲ ಮುಖ್ಯಮಂತ್ರಿ ಪದವಿಗಾಗಿ ‘ಸಂಗೀತ ಕುರ್ಚಿ’ ನಡೆಸುವುದಷ್ಟೇ ರಾಜ್ಯದ ಆಡಳಿತದಲ್ಲಿ ಕಂಡುಬರುತ್ತಿದೆ ಎಂದು ನಳಿನ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಆಂತರಿಕ ಕಲಹದಿಂದಾಗಿ ಕಾಂಗ್ರೆಸ್ ಸರ್ಕಾರ ಪ್ರಸ್ತುತ ಆಕ್ಷಿಜನ್ ವ್ಯವಸ್ಥೆಯಲ್ಲಿದೆ. ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಜನತೆ ರೋಸಿ ಹೋಗಿದ್ದಾರೆ. ಶಾಂತಿ, ಸುವ್ಯಸ್ಥೆ ಸಂಪೂರ್ಣ ಕುಸಿದು ಹೋಗಿದೆ ಎಂದು ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಆರೋಪಿಸಿದ್ದಾರೆ.

ಅವರು ವಿಧಾನ ಪರಿಷತ್ ಉಪಚುನಾವಣೆಯ ಅಂಗವಾಗಿ ಶನಿವಾರ ಪುತ್ತೂರಿಗೆ ಆಗಮಿಸಿದ ಸಂದರ್ಭ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣವು ಲಜ್ಜೆಗೆಟ್ಟ ಹಾಗೂ ನೀತಿಗೆಟ್ಟ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಗ್ರಾಮಮಟ್ಟದಿಂದ ಆರಂಭಗೊಂಡು ವಿಧಾನಸಭಾ ಕಚೇರಿ ತನಕ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಕೇವಲ ಮುಖ್ಯಮಂತ್ರಿ ಪದವಿಗಾಗಿ ‘ಸಂಗೀತ ಕುರ್ಚಿ’ ನಡೆಸುವುದಷ್ಟೇ ರಾಜ್ಯದ ಆಡಳಿತದಲ್ಲಿ ಕಂಡುಬರುತ್ತಿದೆ ಎಂದು ಹೇಳಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್ ಮಾರ್ತಾ, ಪುತ್ತೂರು ನಗರಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಿತೇಶ್ ಕುಮಾರ್ ಶಾಂತಿವನ, ಪ್ರೇಮಾನಂದ ಶೆಟ್ಟಿ, ದೇವದಾಸ್, ಸಂತೋಷ್ ರೈ ಕೈಕಾರ ಮತ್ತು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ