ಮುಧೋಳ-ಲೋಕಾಪೂರ ಎಪಿಎಂಸಿ ಅಭಿವೃದ್ಧಿಗೆ ಬದ್ಧ: ಸಚಿವ ತಿಮ್ಮಾಪೂರ

KannadaprabhaNewsNetwork |  
Published : Jan 10, 2025, 12:45 AM IST
ಮುಧೋಳ ಎಪಿಎಂಸಿ ನೂತನ ನಾಮ ನಿರ್ದೇಶಕರನ್ನು ಸಚಿವ ತಿಮ್ಮಾಪೂರ ಸನ್ಮಾನಿಸಿದರು. | Kannada Prabha

ಸಾರಾಂಶ

ಬಿಜೆಪಿ ಸರ್ಕಾರ ಕೆಲವು ಯೋಜನೆಗಳನ್ನು ರದ್ದು ಪಡಿಸಿದ್ದರಿಂದ ಎಪಿಎಂಸಿ ಮಾರುಕಟ್ಟೆಗಳು ಈಗ ಆದಾಯವಿಲ್ಲದೆ ಸಂಕಷ್ಟದಲ್ಲಿವೆ

ಕನ್ನಡಪ್ರಭ ವಾರ್ತೆ ಮುಧೋಳ

ರೈತನು ಬೆ‍ಳೆದ ಕೃಷಿ ಉತ್ಪನ್ನಗಳನ್ನು ವೈಜ್ಞಾನಿಕ ಬೆಲೆಗೆ ಮಾರಾಟ ಮಾಡಲು ಸುಸಜ್ಜಿತ ಮಾರುಕಟ್ಟೆ ಅತೀ ಅವಶ್ಯವಾಗಿದೆ. ಈ ನಿಟ್ಟಿನಲ್ಲಿ ತಾಲೂಕಿನ ಮುಧೋಳ ಮತ್ತು ಲೋಕಾಪೂರದ ಎಪಿಎಂಸಿ ಮಾರುಕಟ್ಟೆ ಅಭಿವೃದ್ಧಿ ಪಡಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ಮುಧೋಳ ಎಪಿಎಂಸಿಗೆ ನೂತನವಾಗಿ ನೇಮಕಗೊಂಡಿರುವ ನಾಮ ನಿರ್ದೇಶಕ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸದಸ್ಯರಗೆ ಗುರುವಾರ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಎಪಿಎಂಸಿ ಸಚಿವನಾಗಿದ್ದಾಗ ಗ್ರಾಮೀಣ ಸಂತೆ, ಆವರ್ಥನಿಧಿ, ರೈತರಿಗೆ ಮಾರುಕಟ್ಟೆ ಮಾಹಿತಿ ಕೇಂದ್ರ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೆ. ಆದರೆ ಬಿಜೆಪಿ ಸರ್ಕಾರ ಕೆಲವು ಯೋಜನೆಗಳನ್ನು ರದ್ದು ಪಡಿಸಿದ್ದರಿಂದ ಎಪಿಎಂಸಿ ಮಾರುಕಟ್ಟೆಗಳು ಈಗ ಆದಾಯವಿಲ್ಲದೆ ಸಂಕಷ್ಟದಲ್ಲಿವೆ ಎಂದು ಹೇಳಿದರು. ಮುಧೋಳ ಮತ್ತು ಲೋಕಾಪೂರ ಎಪಿಎಂಸಿಗೆ ಬೇಕಾಗುವ ಅತೀ ಅವಶ್ಯಕ ಸೌಲಭ್ಯಗಳನ್ನು ಒದಗಿಸಲು ನಾನು ಸರ್ಕಾರದಿಂದ ಅನುದಾನ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಹೇಳಿದರು.

ಮುಧೋಳ ಎಪಿಎಂಸಿಗೆ ನೂತನವಾಗಿ ನಾಮ ನಿರ್ದೇಶಕ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂಗಪ್ಪ ಇಮ್ಮನ್ನವರ ಅವರು ಸಚಿವರಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿ, ಮಾತನಾಡಿ, ನಾನು ರೈತರ ಪರವಾಗಿದ್ದು ರೈತರ ಹಿತಕಾಪಾಡುವಲ್ಲಿ ಮತ್ತು ಎಪಿಎಂಸಿ ಮಾರುಕಟ್ಟೆ ಸುಧಾರಣೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಕೋರುತ್ತೇನೆಂದು ಹೇಳಿದರು. ಮುಧೋಳ-ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಎಪಿಎಂಸಿ ನಾಮ ನಿರ್ದೇಶನ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಎಪಿಎಂಸಿ ಅಧಿಕಾರಿಗಳು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ