ಮುಗ್ರಹಳ್ಳಿ ಬಸ್ ತಂಗುದಾಣ ಶಿಥಿಲ: ಹೊಸ ಕಟ್ಟಡ ನಿರ್ಮಿಸಲು ಒತ್ತಾಯ

KannadaprabhaNewsNetwork |  
Published : Oct 15, 2026, 02:00 AM IST
ಸುದ್ದಿ | Kannada Prabha

ಸಾರಾಂಶ

ಆಲ್ದೂರುಬಿದರಹಳ್ಳಿ ಗ್ರಾಪಂ ವ್ಯಾಪ್ತಿಯ ಮುಗ್ರಹಳ್ಳಿ ಗ್ರಾಮದ ಬಸ್ ತಂಗುದಾಣ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಗಿಡ ಗಂಟಿಗಳಿಂದ ಮುಚ್ಚಿಹೋಗಿದೆ. ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹಳೆಯ ತಂಗುದಾಣ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಆಲ್ದೂರು

ಬಿದರಹಳ್ಳಿ ಗ್ರಾಪಂ ವ್ಯಾಪ್ತಿಯ ಮುಗ್ರಹಳ್ಳಿ ಗ್ರಾಮದ ಬಸ್ ತಂಗುದಾಣ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಗಿಡ ಗಂಟಿಗಳಿಂದ ಮುಚ್ಚಿಹೋಗಿದೆ. ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹಳೆಯ ತಂಗುದಾಣ ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.ಮುಗ್ರಹಳ್ಳಿ ಗ್ರಾಮದ ಮೂಲಕ ರಾ.ಹೆ.173 ಹಾದುಹೋಗಿದೆ. ಈ ಮಾರ್ಗವಾಗಿ ಮಂಗಳೂರು, ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುವ ಈ ಸ್ಥಳದಲ್ಲಿ ತಂಗುದಾಣ ಅಗತ್ಯ ಹೆಚ್ಚಿದೆ.ಗ್ರಾಮದಲ್ಲಿ ಹೊಸ ಬಸ್ ತಂಗುದಾಣ ನಿರ್ಮಿಸಿದರೆ ದೂರದ ಊರುಗಳಿಗೆ ತೆರಳುವ ಗ್ರಾಮಸ್ಥರು ಸೇರಿದಂತೆ ನೂರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿದರಹಳ್ಳಿ ಬಿ.ಎಸ್. ಜಯರಾಮ್ ಅಭಿಪ್ರಾಯಪಟ್ಟರು.ಗ್ರಾಮದ ಮುಖಂಡ ಯೋಗೇಶ್ ಹಾಗೂ ಪಂಚಾಯಿತಿ ಮಾಜಿ ಸದಸ್ಯ ವಿಶ್ವ ಮಾತನಾಡಿ, ಗ್ರಾಮದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ರಾಷ್ಟ್ರೀಯ ಹೆದ್ದಾರಿ ಪಕ್ಕದ ಗ್ರಾಮಕ್ಕೆ ಸುಸಜ್ಜಿತ ಬಸ್ ತಂಗುದಾಣ ಅತ್ಯಗತ್ಯ. ಮಳೆ ಮತ್ತು ಬಿಸಿಲಿನಿಂದ ರಕ್ಷಣೆ ಪಡೆಯಲು ಪ್ರಯಾಣಿಕರಿಗೆ ತಂಗುದಾಣ ನೆರವಾಗಲಿದೆ. ಬಸ್‌ಗಾಗಿ ಕಾಯು ವವರು ವಿಶ್ರಾಂತಿ ಪಡೆಯಲು ಅನುಕೂಲ. ಆದ್ದರಿಂದ ಪಂಚಾಯಿತಿ ಅಧಿಕಾರಿಗಳು ಹೊಸ ಕಟ್ಟಡ ನಿರ್ಮಿಸಬೇಕು ಎಂದು ಆಗ್ರಹಿಸಿದರು.ಅನುದಾನಕ್ಕೆ ಮನವಿ: ಬಿದರಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ದುಗ್ಗಮ್ಮ ಪ್ರತಿಕ್ರಿಯಿಸಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಆದಾಯದ ಮೂಲಗಳು ಸೀಮಿತವಾಗಿವೆ. ಪಂಚಾಯಿತಿಗೆ ಸೇರಿದ ಮಳಿಗೆಗಳು ಸೇರಿದಂತೆ ಇತರ ಆದಾಯದ ಮೂಲ ಗಳಿಲ್ಲ. ಕಂದಾಯ ತೆರಿಗೆಯಿಂದ ಸಂಗ್ರಹವಾಗುವ ಹಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ. ಪ್ರಸ್ತುತ 15ನೇ ಹಣಕಾಸು ಯೋಜನೆ ಅನುದಾನ ಮಾತ್ರ ಲಭ್ಯವಿದೆ. ಮುಗ್ರಹಳ್ಳಿಯಲ್ಲಿ ನೂತನ ಬಸ್ ತಂಗುದಾಣ ನಿರ್ಮಿಸಲು ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ತಾಪಂ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ವಿಷಯ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಲಿ: ಬೊಮ್ಮಾಯಿ
2ನೇ ದಿನವೂ ಕಬ್ಬು ಬೆಳೆಗಾರರ ಪ್ರತಿಭಟನೆ