ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಹರಿಹರದ ಕೃಷ್ಣಪ್ಪ ಭವನ ಮಾನವ ಮಂಟಪ ಮೈತ್ರಿ ವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕ ಸೋಷಿಯಲಿಸ್ಟ್ ಫೋರಂನ ರಾಜ್ಯ ಮಟ್ಟದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಖಂಡ ಹಿಂದೂಸ್ಥಾನ ರಚನೆ, ಅಂಗ್ರೇಜಿ ಹಠಾವೋ, ಪ್ರಾದೇಶಿಕ ಭಾಷೆಗಳಿಗೆ ಒತ್ತು, ಜಾತ್ಯತೀತ ಸರ್ವ ಧರ್ಮಗಳ ಸಮನ್ವಯ ಸಂವಿಧಾನ ಸಂರಕ್ಷಿಸುವಂತೆ ಎನ್.ಮಂಜಪ್ಪ ಸಮಾಜವಾದಿ ಪಾರ್ಟಿ ಕಾರ್ಯಕರ್ತರಿಗೆ ಕರೆ ನೀಡಿದರು.
ಸಮಾಜವಾದಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಎಸ್.ಜಿ.ಹಿರೇಮಠ್ ಅವರು, ಸಮಾಜವಾದ ಹಾಗೂ ಸಮಾಜವಾದಿ ಪಾರ್ಟಿ ಬೆಳೆದು ಬಂದ ದಾರಿ ಮುಲಾಯಂಸಿಂಗ್ ಯಾದವ್ ಹಾಗೂ ಎಸ್.ಬಂಗಾರಪ್ಪನವರ ಜೊತೆಗಿನ ಒಡನಾಟವನ್ನು ಕುರಿತು ಸ್ಮರಿಸಿದರು.ಕಲಬುರಗಿ ಜಿಲ್ಲೆಯಲ್ಲಿ ಸಮಾಜವಾದಿ ಪಾರ್ಟಿಯನ್ನು ಗ್ರಾಮ ಮಟ್ಟದಲ್ಲಿ ಕಟ್ಟಿ ಚುನಾವಣೆ ನಡೆಸಿದ್ದರ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮಹಾದಾಯಿ ಯೋಜನೆ. ನೀರಾವರಿ ಸಮಸ್ಯೆಗೆ ನಿವಾರಣೆಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಶೀಘ್ರ ಅನುಷ್ಠಾನಗೊಳಿಸಬೇಕು. ಬಚಾವತ್ ಆಯೋಗದ ಎಸ್ಕೀಂ ಮತ್ತು ಬಿಸ್ಕೀಂ ನಿಂದಾಗಿ ಕೃಷ್ಣಾ ನದಿ ಪಾತ್ರ ಮತ್ತು ಕಾವೇರಿ ನದಿ ಪಾತ್ರದಿಂದ ಸುಮಾರು 282 ಟಿಎಂಸಿ ನೀರು ಕರ್ನಾಟಕ ರಾಜ್ಯದ ಪಾಲು ಆಂಧ್ರ, ತಮಿಳುನಾಡು ಮತ್ತು ಕೇರಳಕ್ಕೆ ಹರಿದು ಹೋಗುತ್ತಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ರಾಜ್ಯದಲ್ಲಿ ಕೃಷಿ ಚಟುವಟಿಕೆ ನಡೆಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ರಾಜ್ಯಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದರು.
ಸಮಾಜವಾದಿ ಪಾರ್ಟಿಯ ಪಿಡಿಎ ಸಂಘಟನೆ ಮೂಲಕ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಜಾತಿ ಜನಸಂಖ್ಯೆ ಜನಗಣತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಾರದರ್ಶಕವಾಗಿ ನಡೆಸಬೇಕೆಂಬ ನಿರ್ಣಯ ಕೈಗೊಳ್ಳಲಾಯಿತು.