ಮೂಲ್ಕಿ: ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

KannadaprabhaNewsNetwork |  
Published : Feb 09, 2025, 01:32 AM IST
ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ  | Kannada Prabha

ಸಾರಾಂಶ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಲ್ಕಿ ತಾಲೂಕು ಘಟಕ ವತಿಯಿಂದ ಐಕಳ ಪೊಂಪೈ ಕಾಲೇಜಿನಲ್ಲಿ ಆಯೋಜಿಸಲಾದ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಗ್ರಾಮೀಣಮಟ್ಟದಲ್ಲಿ ಸಾಹಿತ್ಯ ಸಮ್ಮೇಳನ ನಡೆದಾಗ ಕನ್ನಡ ಉಳಿಸಿ ಬೆಳಸಲು ಸಾಧ್ಯವಿದೆ. ಸಮ್ಮೇಳನಗಳ ಮೂಲಕ ಸ್ಥಳೀಯ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ದೊರೆಯುತ್ತದೆ. ಕಾವ್ಯಾಲೋಕನಕ್ಕೆ ಸಾಹಿತ್ಯ ಸಮ್ಮೇಳನ ದಾರಿದೀಪವಾಗಲಿ ಎಂದು ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಶ್ರೀ ಹರಿನಾರಾಯಣ ದಾಸ ಆಸ್ರಣ್ಣ ಹೇಳಿದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಲ್ಕಿ ತಾಲೂಕು ಘಟಕ ವತಿಯಿಂದ ಐಕಳ ಪೊಂಪೈ ಕಾಲೇಜಿನಲ್ಲಿ ನಡೆದ ಮೂಲ್ಕಿ ತಾಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮ್ಮೇಳನಾಧ್ಯಕ್ಷ, ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ್‌ ಡಿ.ಎಸ್‌. ವಹಿಸಿದ್ದು, ಕಸಾಪ ದ.ಕ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ದಾಮಸ್‌ ಕಟ್ಟೆ ಕಿರೆಂ ಚರ್ಚ್ ಪಾಲನಾ ಮಂಡಳಿ ಅಧ್ಯಕ್ಷ ರೋಹನ್ ಡಿಕೋಸ್ತ, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಶೆಟ್ಟಿ, ಪೊಂಪೈ ಪ.ಪೂ. ಕಾಲೇಜು ಪ್ರಾಂಶುಪಾಲ ಡೆಸ್ಮಂಡ್ ಡಿಮೆಲ್ಲೊ, ಮೂಲ್ಕಿ ತಾಲೂಕು ಘಟಕ ಅಧ್ಯಕ್ಷ ಮಿಥುನ್ ಕೊಡೆತ್ತೂರು, ಸಮಿತಿ ಅಧ್ಯಕ್ಷ ಪೃಥ್ವಿರಾಜ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಹಿಲ್ದಾ ಡಿಸೋಜ, ಮೂಲ್ಕಿ ಹೋಬಳಿ ಕಸಾಪ ಅಧ್ಯಕ್ಷ ಜೊಸ್ಸಿ ಪಿಂಟೋ, ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ಡಮನೆ ಮತ್ತಿತರರು ಉಪಸ್ಥಿತರಿದ್ದರು.

ಮೂಲ್ಕಿ ತಾಲೂಕು ಸಮ್ಮೇಳನದ ಅಂಗವಾಗಿ ಆಯೋಜಿಸಲಾದ ವಿವಿಧ ಸಾಹಿತ್ಯ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮ್ಮೇಳನಾಧ್ಯಕ್ಷ ಶ್ರೀಧರ ಡಿ.ಎಸ್. ಅವರನ್ನು ಗೌರವಿಸಲಾಯಿತು. ಸಮ್ಮೇಳನ ಸಮಿತಿಯ ಸಂಚಾಲಕ ಡಾ.ಪುರುಷೋತ್ತಮ ಕೆ.ವಿ. ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹೆರಿಕ್ ಪಾಯಸ್ ವಂದಿಸಿದರು. ಪ್ರಕಾಶ್ ಆಚಾರ್ಯ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ