26ರಂದು ಮೂಲ್ಕಿ-ಮೂಡುಬಿದಿರೆ ವಲಯ ಪುರುಷರ, ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆ: ನಿಡ್ಡೋಡಿ ಜಗನ್ನಾಥ ಶೆಟ್ಟಿ

KannadaprabhaNewsNetwork |  
Published : Apr 13, 2026, 02:30 AM IST
ಕಿನ್ನಿಗೋಳಿಯಲ್ಲಿ 26 ರಂದು ಮೂಲ್ಕಿ-ಮೂಡಬಿದರೆ ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆ | Kannada Prabha

ಸಾರಾಂಶ

ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ವತಿಯಿಂದ ಮೂಲ್ಕಿ-ಮೂಡುಬಿದರೆ ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆ ಏ. 26ರಂದು ಬೆಳಗ್ಗೆ 11 ಗಂಟೆಗೆ ಕಿನ್ನಿಗೋಳಿ ಸೈಂಟ್ ಮೇರೀಸ್ ಸ್ಪೆಷಲ್ ಸ್ಕೂಲ್, ಚರ್ಚ್ ಬಳಿ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ಅಧ್ಯಕ್ಷ ಡಾ. ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ಹೇಳಿದರು.

ಮೂಲ್ಕಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ವತಿಯಿಂದ ಮೂಲ್ಕಿ-ಮೂಡುಬಿದರೆ ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆ ಏ. 26ರಂದು ಬೆಳಗ್ಗೆ 11 ಗಂಟೆಗೆ ಕಿನ್ನಿಗೋಳಿ ಸೈಂಟ್ ಮೇರೀಸ್ ಸ್ಪೆಷಲ್ ಸ್ಕೂಲ್, ಚರ್ಚ್ ಬಳಿ ನಡೆಯಲಿದೆ ಎಂದು ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಿನ್ನಿಗೋಳಿ ಅಧ್ಯಕ್ಷ ಡಾ. ಜಗನ್ನಾಥ ಶೆಟ್ಟಿ ನಿಡ್ಡೋಡಿ ಚಾವಡಿ ಮನೆ ಹೇಳಿದರು.ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಜಯ ಗಳಿಸಿದವರಿಗೆ ಮೊದಲನೇ ಬಹುಮಾನ 30,000 ಮತ್ತು ಟ್ರೋಫಿ, ಎರಡನೇ ಬಹುಮಾನ 20,000 ಮತ್ತು ಟ್ರೋಫಿ, ಮೂರನೇ ಬಹುಮಾನ 10,000 ಮತ್ತು ಟ್ರೋಫಿ, ನಾಲ್ಕನೇ ಬಹುಮಾನ 5,000 ರು.ನಗದು ಮತ್ತು ಟ್ರೋಫಿ ನೀಡಲಾಗುವುದು. ನೋಂದಣಿಗೆ ಏ. 23 ಕೊನೆಯ ದಿನವಾಗಿದೆ. ಪಂದ್ಯಾಟದಲ್ಲಿ 30 ಪುರುಷ ಹಾಗೂ 20 ಮಹಿಳಾ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಕಳೆದ 16 ವರ್ಷಗಳಿಂದ ಅನೇಕ ಸಾಮಾಜಿಕ , ಶಿಕ್ಷಣಕ್ಕೆ ಸಹಾಯ ಹಸ್ತ ಹಾಗೂ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಸಂಚಾಲಕ ನರಸಿಂಹ ಮಡಿವಾಳ, ಶರತ್ ಶೆಟ್ಟಿ ಸಂಕಲಕರಿಯ, ನರೇಂದ್ರ ಕೆರೆಕಾಡು ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು
ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿಡಿ