ನಿರಂತರ ಕಲಾಸೇವೆಗೆ ರಂಗಚಾವಡಿ ಮಾದರಿ: ಐಕಳ

KannadaprabhaNewsNetwork |  
Published : Nov 04, 2026, 01:45 AM IST
ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ | Kannada Prabha

ಸಾರಾಂಶ

ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುರತ್ಕಲ್‌ ನ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಜರಗಿದ ರಂಗು ರಂಗಿನ ರಂಗೋತ್ಸವ ಕಾರ್ಯಕ್ರಮ

ಮೂಲ್ಕಿ: ರಂಗಚಾವಡಿ ಸಂಸ್ಥೆಯು ನಿರಂತರವಾಗಿ ಕಲಾ ಸೇವೆ ಮಾಡುವುದರ ಜೊತೆಗೆ, ಜಿಲ್ಲೆಯಲ್ಲಿರುವ ಕಲಾವಿದರನ್ನು ಗುರುತಿಸಿ ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸುವ ಉತ್ತಮ ಕಾರ್ಯ ಮಾಡುತ್ತಿದೆ. ಜೊತೆಗೆ ಪರಿಸರದ ಜನರಿಗೆ ರಂಗು ರಂಗಿನ ಕಾರ್ಯಕ್ರಮ ನೀಡುತ್ತಿದೆಯೆಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುರತ್ಕಲ್‌ ನ ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಜರಗಿದ ರಂಗು ರಂಗಿನ ರಂಗೋತ್ಸವ ಕಾರ್ಯಕ್ರಮ ಮತ್ತು 2026 ನೇ ಸಾಲಿನ ರಂಗಚಾವಡಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2026 ನೇ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಹಿರಿಯ ಕಲಾವಿದ ರಂಗ ಭೂಷಣ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ನೀಡಿ ಗೌರವಿಸಲಾಯಿತು.

ಉದ್ಯಮಿ ಗಿರೀಶ್ಎಂ ಶೆಟ್ಟಿ ಶುಭ ಹಾರೈಸಿದರು. ದ.ಕ.ಜಿಲ್ಲಾ ಬಸ್‌ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಸಿ ಎ ಸುನೀಲ್ ಭಂಡಾರಿ ಬೆಂಗಳೂರು, ಚಲನ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಉದ್ಯಮಿ ಈಶ್ವರ್ ಪ್ರಸಾದ್ ಶೆಟ್ಟಿ, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ನ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ಚಲನಚಿತ್ರ ನಿರ್ಮಾಪಕ ರವಿ ರೈ ಕಲಶ, ರಂಗಚಾವಡಿ ಸಂಸ್ಥೆಯ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರಿದ್ದರು. ನ್ಯಾಯವಾದಿ ಶಶಿರಾಜ್ ಕಾವೂರು ಅಭಿನಂದನ ಭಾಷಣಗೈದರು. ಲಾವಣ್ಯ ಶೆಟ್ಟಿ ಚೇಳೈರು ಪ್ರಾರ್ಥಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್ ನಿರೂಪಿಸಿದರು.ಬಳಿಕ ಸ್ಟಾರ್ ವಾಯ್ಸ್ ಮೆಲೊಡೀಸ್ ರವರಿಂದ ಸಂಗೀತ ಗಾನಸುಧೆ ಹಾಗೂ ಕಲಾ ಸಂಗಮ‌ ಕಲಾವಿದರಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರನೂತನ ಕೃತಿ ಶ್ರೀಮತಿ ಸತ್ಯಭಾಮ ನಾಟಕ ಪ್ರದರ್ಶನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌