ವಳಚ್ಚಿಲ್‌: ಬೃಹತ್ ಜನಸ್ಪಂದನಾ ಕಾರ್ಯಕ್ರಮ

KannadaprabhaNewsNetwork |  
Published : Feb 18, 2026, 03:00 AM IST
ಆರೋಗ್ಯ ತಪಾಸಣಾ ಶಿಬಿರ | Kannada Prabha

ಸಾರಾಂಶ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಬ್ಲಾಕ್ ವ್ಯಾಪ್ತಿಯ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಅರ್ಕುಳ ವಳಚ್ಚಿಲ್ ನಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮ

ಮೂಲ್ಕಿ: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಗುರುಪುರ ಬ್ಲಾಕ್ ವ್ಯಾಪ್ತಿಯ ಅರ್ಕುಳ ಗ್ರಾಮ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಅರ್ಕುಳ ವಳಚ್ಚಿಲ್ ನಲ್ಲಿ ಬೃಹತ್ ಜನಸ್ಪಂದನಾ ಕಾರ್ಯಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿದರು.

ಉಚಿತ ಆರೋಗ್ಯ ತಪಾಸಣಾ ಶಿಬಿರ, ಕಣ್ಣಿನ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ, ಮತದಾರರ ಚೀಟಿ, ಆಧಾರ್ ಕಾರ್ಡ್ ಮತ್ತು ಸರ್ಕಾರಿ ಯೋಜನೆಗಳ ಸೇವೆಗಳು ಶಿಬಿರದಲ್ಲಿ ಲಭ್ಯವಿದ್ದವು, ಕಾರ್ಯಕ್ರಮದಲ್ಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಮಾಜಿ ಸಚಿವ ರಮಾನಾಥ ರೈ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಮಂಗಳೂರು ತಾಲೂಕು ಗ್ಯಾರೆಂಟಿ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಯುವ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಗಿರೀಶ್ ಆಳ್ವ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಇಬ್ರಾಹೀಂ‌ ನವಾಝ್, ಮಂಗಳೂರು ಉತ್ತರ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ರೂಪೇಶ್ ರೈ, ಅಡ್ಯಾರ್ ವಲಯ ಕಾಂಗ್ರೆಸ್ ಅಧ್ಯಕ್ಷ ರೋನಾಲ್ಡ್ ಸಲ್ಡಾನಾ, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮುಫೀದ್, ಅಶ್ರಫ್ ಅಡ್ಯಾರ್, ತೌಫೀಕ್ ವಳಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕೈ ಜೋಡಿಸಿ
ವಂಚಕ ಉದ್ಯೋಗ ಏಜೆನ್ಸಿಗಳ ಕಡಿವಾಣಕ್ಕೆ ವಿದೇಶಾಂಗ ಸಚಿವಗೆ ಸಂಸದ ಕ್ಯಾ. ಚೌಟ ಒತ್ತಾಯ