ಕೊಳ್ನಾಡು: 82 ಕೋಟಿ ರು. ಮೌಲ್ಯದ ಮಾದಕ ವಸ್ತು ನಾಶ

KannadaprabhaNewsNetwork |  
Published : Jul 31, 2026, 03:00 AM IST
ಮಂಗಳೂರು ನಗರ ಪೊಲೀಸ್ ವತಿಯಿಂದ  ಮೂಲ್ಕಿಯಲ್ಲಿ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ | Kannada Prabha

ಸಾರಾಂಶ

ಮಂಗಳೂರು ನಗರ ಪೊಲೀಸ್ ವತಿಯಿಂದ ಮೂಲ್ಕಿಯ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ವೈದ್ಯಕೀಯ ತ್ಯಾಜ್ಯ ಘಟಕದಲ್ಲಿ ಬುಧವಾರ ಸುಮಾರು 82 ಕೋಟಿ ರು. ಮೌಲ್ಯದ ಮಾದಕ ವಸ್ತುಗಳನ್ನು ಸುಡಲಾಯಿತು.

ಮೂಲ್ಕಿ: ಮಂಗಳೂರು ನಗರ ಪೊಲೀಸ್ ವತಿಯಿಂದ ಮೂಲ್ಕಿಯ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ವೈದ್ಯಕೀಯ ತ್ಯಾಜ್ಯ ಘಟಕದಲ್ಲಿ ಬುಧವಾರ ಸುಮಾರು 82 ಕೋಟಿ ರು. ಮೌಲ್ಯದ ಮಾದಕ ವಸ್ತುಗಳನ್ನು ಸುಡಲಾಯಿತು.

ಈ ಸಂದರ್ಭ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು 2026ನೇ ಸಾಲಿನಲ್ಲಿ ಇದುವರೆಗೆ 87 ಎನ್.ಡಿ.ಪಿ.ಎಸ್. ಪ್ರಕರಣಗಳನ್ನು ದಾಖಲಿಸಿ 157 ಪೆಡ್ಲರ್ಸ್‌ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ರು. 8,18, 30, 130 ಮೌಲ್ಯದ 148 ಕೆ.ಜಿ. 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂ ಡಿ ಎಂ ಎ, 1 ಕೆ ಜಿ. 705 ಗ್ರಾಂ ಹೈಡ್ರೋ ವೀಡ್‌ ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ವ್ಯಕ್ತಿಗಳ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದರು.

ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ಮಾದಕ ವಸ್ತು ನಾಶಪಡಿಸುವ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು.

ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳ 59 ಎನ್.ಡಿ.ಪಿ.ಎಸ್‌. ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ 450 ಕೆ.ಜಿ ಗಾಂಜಾ, 43 ಕೆಜಿ 260 ಗ್ರಾಂ ಎಂ ಡಿ ಎಮ್ಎ ,80 ಗ್ರಾಂ ಚರಸ್, 880 ಗ್ರಾಂ ಹೈಡೋ ವೀಡ್ ಗಾಂಜಾ,1 ಕೆ.ಜಿ. 200 ಗ್ರಾಂ ಭಾಂಗ್ ಸೇರಿದಂತೆ ಒಟ್ಟಾರೆ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಸುಟ್ಟು ವಿಲೇವಾರಿ ಮಾಡಲಾಯಿತು.ಸಾರ್ವಜನಿಕರು ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸ್‌ ಇಲಾಖೆಯಿಂದ ಸೃಜನೆ ಮಾಡಲಾಗಿರುವ ಕ್ಯೂ.ಅರ್ ಕೋಡ್ ಮೂಲಕ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 112 /9480802321 ಸಂಪರ್ಕಿಸಿ ಮಾಹಿತಿ ನೀಡುವಂತೆ ಕಮಿಷನರ್‌ ತಿಳಿಸಿದರು.

ಡೆಪ್ಯುಟಿ ಕಮಿಷನರ್‌ ಗಳಾದ ಮಂಗಳೂರು ನಗರ ಪೊಲೀಸ್‌ ಕಾನೂನು ಮತ್ತು ಸುವ್ಯವಸ್ಥೆಯ ವಿಭಾಗದ ಮಿಥುನ್‌ ಎಚ್‌ ಎನ್‌, ಅಪರಾಧ ಮತ್ತು ಸಂಚಾರ ವಿಭಾಗದ ಕೆ ರವಿಶಂಕರ್‌, ಎಸಿಪಿಗಳಾದ ಶ್ರೀಕಾಂತ್‌, ಗೀತಾ ಕುಲಕರ್ಣಿ, ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಠಾಣೆಗಳ ಠಾಣಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಿಕೋದ್ಯಮದಲ್ಲಿ ಉದ್ಯೋಗ ಕಸಿದುಕೊಳ್ಳುತ್ತಿರುವ ಎಐ
ಮಹಾವೀರ ಸಹಕಾರಿ ಬ್ಯಾಂಕ್‌ಗೆ ₹4.01 ಕೋಟಿ ಲಾಭ