ಶಿಮಂತೂರು ದೇವಳ ಮಹಾ ರಥೋತ್ಸವ

KannadaprabhaNewsNetwork | Published : Mar 1, 2024 2:23 AM

ಸಾರಾಂಶ

ಬೆಳಗ್ಗೆ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ,ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿಸವಾರಿ, ಶ್ರೀ ದೇವರ ಮಹಾರಥೋತ್ಸವ, ಜಳಕದ ಬಲಿ, ಆವಭೃತ ಸ್ನಾನ, ಧ್ವಜಾವರೋಹಣ ನಡೆಯಿತು.

ಮೂಲ್ಕಿ: ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾ ರಥೋತ್ಸವ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ಬೆಳಗ್ಗೆ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ, ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ,ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿಸವಾರಿ, ಶ್ರೀ ದೇವರ ಮಹಾರಥೋತ್ಸವ, ಜಳಕದ ಬಲಿ, ಆವಭೃತ ಸ್ನಾನ, ಧ್ವಜಾವರೋಹಣ ನಡೆಯಿತು.

ಈ ಸಂದರ್ಭ ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ, ಜ್ಯೋತಿಷಿ ವಿಶ್ವನಾಥ ಭಟ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ವಿದ್ವಾನ್ ನಾಗೇಶ್ ಬಪ್ಪನಾಡು,ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್ ಶೆಟ್ಟಿ ,ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

---ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಜಾತ್ರಾ ಧ್ವಜಾರೋಹಣ

ಮೂಲ್ಕಿ: ಮೂಲ್ಕಿ ಸಮೀಪದ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಧ್ವಜಾರೋಹಣ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಶ್ರೀ ದೇವರ ಧ್ವಜಾರೋಹಣ ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರ ಉತ್ಸವ ಬಲಿ ನಡೆಯಿತು.ಈ ಸಂದರ್ಭ ಆಧ್ಯಾತ್ಮಿಕ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ, ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವರಾವ್, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ದೇವಪ್ರಸಾದ್ ಪುನರೂರು ಮತ್ತಿತರರು ಉಪಸ್ಥಿತರಿದ್ದರು.--- ಹರಿಹರ ಕ್ಷೇತ್ರದಲ್ಲಿ ಮಾ. 8ರಿಂದ ಶಿವರಾತ್ರಿ, ಸಾಂಸ್ಕೃತಿಕ ಕಾರ್ಯಕ್ರಮ

ಮೂಲ್ಕಿ: ಮೂಲ್ಕಿಯ ಕಾರ್ನಾಡಿನ ಶ್ರೀ ಹರಿಹರ ಕ್ಷೇತ್ರದ ಶ್ರೀ ಹರಿಹರ ಕ್ಷೇತ್ರ ಯುವಕ ವೃಂದ ಮತ್ತು ಮಹಿಳಾ ಮಂಡಳಿಯ ಆಶ್ರಯದಲ್ಲಿ 40ನೇ ವರ್ಷದ ಮಹಾ ಶಿವರಾತ್ರಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮಾರ್ಚ್ 9ರಿಂದ 11ರ ವರೆಗೆ ಜರುಗಲಿವೆ. ಮಾ.8ರಂದು ಸಂಜೆಯಿಂದ ಮಾರ್ಚ್‌ 9ರ ಬೆಳಗ್ಗೆ 6-30ರ ತನಕ ಜಾಗರಣಾ ಭಜನಾ ಕಾರ್ಯಕ್ರಮ ಜರುಗಲಿದೆ. ಹರಿಹರ ಕ್ಷೇತ್ರದ ಆಡಳಿತ ಮೊಕ್ತೇಸರ ಯಂ. ಯಚ್. ಅರವಿಂದ ಪೂಂಜ, ಮೊಕ್ತೇಸರರಾದ ಶಶೀಂದ್ರ ಎಂ. ಸಾಲ್ಯಾನ್, ಆಶಾ ಪ್ರಭು, ಕಾರ್ನಾಡು, ಶ್ರೀ ದುರ್ಗಾಪರಮೇಶ್ವರಿ ಸೇವಾ ಯುವಕ ವೃಂದ, ಬಪ್ಪನಾಡುನ ಅಧ್ಯಕ್ಷ ಪುರಂದರ ಸಿ. ಸಾಲ್ಯಾನ್‌ ಮತ್ತು ಮಂಗಳೂರು ಎಸ್‌ಇಝಡ್‌ ಪ್ರಬಂಧಕ ಪುಂಡಲೀಕ ಶೆಣೈ ಚಾಲನೆ ನೀಡಲಿದ್ದಾರೆ. ಮಾ.9ರಂದು ಭಜನಾ ಕಾರ್ಯಕ್ರಮ, 10ರಂದು ಸಭಾ ಕಾರ್ಯಕ್ರಮ ನಡೆಯಲಿದೆ. 11ರಂದು ಸೋಮವಾರ ಸಂಜೆ ಧಾರ್ಮಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Share this article