ಶಿರ್ವ ಎಂಎಸ್ಆರ್‌ಎಸ್ ಕಾಲೇಜ್‌: ಓರಿಯೆಂಟೇಶನ್ ಕಾರ್ಯಕ್ರಮ

KannadaprabhaNewsNetwork |  
Published : Jul 22, 2026, 02:45 AM IST
20ಶಿರ್ವ | Kannada Prabha

ಸಾರಾಂಶ

ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಂತರಿಕ ಗುಣಮಟ್ಟ ಭರವಸೆ ಕೋಶ ವತಿಯಿಂದ 2026 - 27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮವನ್ನು ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾಪು: ಇಲ್ಲಿನ ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಂತರಿಕ ಗುಣಮಟ್ಟ ಭರವಸೆ ಕೋಶ ವತಿಯಿಂದ 2026 - 27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮವನ್ನು ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಇದರ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಭಾಗವಹಿಸಿ, ಉನ್ನತ ಶಿಕ್ಷಣದಲ್ಲಿ ಶಿಸ್ತು, ಸಮಯ ಪಾಲನೆ, ವ್ಯಕ್ತಿತ್ವ ವಿಕಸನ ಹಾಗೂ ಜೀವನ ಕೌಶಲ್ಯಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜು ಜೀವನವು ಜ್ಞಾನಾರ್ಜನೆಯೊಂದಿಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಸುವರ್ಣಾವಕಾಶವಾಗಿದ್ದು, ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಮಿಥುನ್ ಚಕ್ರವರ್ತಿ, ಕಾಲೇಜಿನ ಶೈಕ್ಷಣಿಕ ಗುಣಮಟ್ಟ, ವಿವಿಧ ಸೌಲಭ್ಯಗಳು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸುಹಾಸ್‌ ನಿರೂಪಿಸಿ. ಕನ್ನಡ ವಿಭಾಗದ ಉಪನ್ಯಾಸಕಿ ವರಮಹಾಲಕ್ಮೀ ಸ್ವಾಗತಿಸಿ, ಐಕ್ಯುಎಸಿ ಸಂಯೋಜಕರಾದ ಡಾ. ಸೋನಾ ಎಚ್.ಸಿ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರ್ಣಂಕಿಲ ಕ್ಷೇತ್ರದ ಮಹಾರಥ, ಅಂಗಣ ಚಪ್ಪರಕ್ಕೆ ಮುಹೂರ್ತ
ದೆಹಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ