ಕರುಣಾಕರ ಶೆಟ್ಟಿಗೆ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Oct 14, 2024, 01:20 AM IST
ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಪ್ರಧಾನ  | Kannada Prabha

ಸಾರಾಂಶ

2024ನೇ ಸಾಲಿನ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ವಿಕೆ ಗ್ರೂಪ್ ಚೇರ್ಮನ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರಿಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಬಂಟ ಸಮಾಜವು ಇತರ ಸಮಾಜಕ್ಕೆ ಮಾದರಿಯಾಗಿದ್ದು ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಕಾರ್ಯ ನಡೆಯಬೇಕು ಎಂದು ಜಾಗತಿಕ ಬಂಟರ ಸಂಘದ ಉಪಾಧ್ಯಕ್ಷ ಕರ್ನೀರೆ ವಿಶ್ವನಾಥ ಶೆಟ್ಟಿ ಹೇಳಿದರು.

ಮೂಲ್ಕಿ ಬಂಟರ ಭವನದಲ್ಲಿ ಮೂಲ್ಕಿ ಬಂಟರ ಸಂಘದ ವತಿಯಿಂದ 2023- 24ನೇ ಸಾಲಿನ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ, ಮೂಲ್ಕಿ ಸುಂದರಾಮ ಶೆಟ್ಟಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ 2024ನೇ ಸಾಲಿನ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ ಯನ್ನು ವಿಕೆ ಗ್ರೂಪ್ ಚೇರ್ಮನ್ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು ಅವರಿಗೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಬಂಟರ ಸಂಘ ಬೆಂಗಳೂರು ಹಾಗೂ ಜಾಗತಿಕ ಬಂಟರ ಸಂಘದ ಒಕ್ಕೂಟ ಮಂಗಳೂರು ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಸುಂದರರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬಪ್ಪನಾಡು ವಾಗ್ದೇವಿ ದಾಸಪ್ಪ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಕುಬೆವೂರು ಶಾಂತ ಸಂಜೀವ ಭಂಡಾರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ನಡೆಯಿತು.

ವಿವಿಧ ಕ್ಷೇತ್ರದ ಸಾಧಕರಾದ ಹರೀಶ್ ಶೆಟ್ಟಿ ತಂಗಾಳಿ ಪಂಜಿನಡ್ಕ (ಕೃಷಿ ಕ್ಷೇತ್ರ), ಮೇಘಶ್ರೀ ಶೆಟ್ಟಿ ಕೊಡೆತ್ತೂರು (ಅಂತರಾಷ್ಟ್ರೀಯ ಯೋಗ ಸಾಧಕಿ), ಪ್ರತೀಕ್ಷಾ ಶೆಟ್ಟಿ ಪಂಜ ಮೊಗಪಾಡಿ (ಶಿಕ್ಷಣ ಕ್ಷೇತ್ರ), ದೀಪಾ ಎಂ. ಹೆಗ್ಡೆ, ಚರಿಷ್ಮಾ ಶೆಟ್ಟಿ ಬಪ್ಪನಾಡು ಗುತ್ತು (ಡಾಕ್ಟರೇಟ್ ಪದವಿ), ತಸ್ಮಯಿ ಎಂ. ಶೆಟ್ಟಿ ಮಿತ್ತಬೈಲುಗುತ್ತು (ರಾಷ್ಟ್ರೀಯ ಮಟ್ಟದ ಸ್ಕೇಟರ್) ಅವರನ್ನು ಗೌರವಿಸಲಾಯಿತು.

ನಂದಿಕೂರು ಎಜುಕೇಶನ್ ಟ್ರಸ್ಟ್‌ನ ಅನಿಲ್ ಶೆಟ್ಟಿ ಕೋಂಜಾಲುಗುತ್ತು, ಬೆಂಗಳೂರು ಬಂಟರ ಸಂಘದ ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿಯ ಚೇರ್ಮನ್ ಉಮೇಶ್ ಕುಮಾರ್ ಶೆಟ್ಟಿ, ಮೂಲ್ಕಿ ಸುಂದರರಾಮ ಶೆಟ್ಟಿ ಟ್ರಸ್ಟ್‌ನ ಟ್ರಸ್ಟಿ ಸುಕುಮಾರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಉಮೇಶ್ ಕುಮಾರ್ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಉಪಾಧ್ಯಕ್ಷ ಜೀವನ್ ಕೆ. ಶೆಟ್ಟಿ, ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ಶರತ್ ಶೆಟ್ಟಿ, ಕೋಶಾಧಿಕಾರಿ ಸ್ವರಾಜ್ ಶೆಟ್ಟಿ ಐಕಳ, ಯುವ ವಿಭಾಗದ ಸಂಚಾಲಕ ದಾಮೋದರ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ರೋಹಿಣಿ ಶೆಟ್ಟಿ, ಪ್ರಚಾರ ವಿಭಾಗದ ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರು ಉಪಸ್ಥಿತರಿದ್ದರು. ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಡಾ. ಸುಧಾರಾಣಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ನ್ಯಾಯದಡಿ ಒಳಮೀಸಲಾತಿ ದೊರೆಯಲಿ: ಬಸವಮೂರ್ತಿ ಶ್ರೀ
ಗುಂಡಾಪುರದ ಬೆಟ್ಟದರಸಮ್ಮನ ದೊಡ್ಡ ಜಾತ್ರೆ ಸಂಪನ್ನ