ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ

KannadaprabhaNewsNetwork |  
Published : Nov 18, 2024, 12:01 AM IST
ಬಹುಸಂಸ್ಕೃತಿ ಉತ್ಸವ ಲಾಂಛನ ಬಿಡುಗಡೆ ಮಾಡುತ್ತಿರುವುದು. | Kannada Prabha

ಸಾರಾಂಶ

ಡಿ.3, 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಅಕಾಡೆಮಿ, ಕೊಂಕಣಿ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ, ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3, 4ರಂದು ನಡೆಯುವ ಬಹುಸಂಸ್ಕೃತಿ ಉತ್ಸವದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.ಡಿ.3, 4ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬಹುಸಂಸ್ಕೃತಿ ಉತ್ಸವ ನಡೆಯಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಅಕಾಡೆಮಿ, ಕೊಂಕಣಿ ಅಕಾಡೆಮಿ, ಅರೆಭಾಷೆ ಅಕಾಡೆಮಿ, ಕೊಡವ ಮತ್ತು ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ, ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ.ಶಾಸಕ ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ, ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್‌ ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರೇಟರ್‌ ಬೆಂಗಳೂರು ಪಾಲಿಕೆಯ ಐದೂ ನಗರ ಪಾಲಿಕೆಗಳ ಆಯವ್ಯಯ ಮಂಡನೆ
ರಸ್ತೆ, ಮೂಲಸೌಕರ್‍ಯಕ್ಕೆ ಭರ್ಜರಿ ಉತ್ತರ - ಪಶ್ಚಿಮ ಪಾಲಿಕೆಯದ್ದೇ ದೊಡ್ಡ ಮೊತ್ತದ ಬಜೆಟ್