ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ೨೩ ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ ೧೪ ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, ೨೦೨೪-೨೫ ನೇ ಸಾಲಿನ ಆರ್ಥಿಕ ವರ್ಷದಲ್ಲಿ ರು. ೮೧೩.೩೩ ಕೋಟಿಗಳ ವ್ಯವಹಾರವನ್ನು ನಡೆಸಿ ರು.೨.೦೧ ಕೋಟಿಗಳ ನಿವ್ವಳ ಲಾಭ ಗಳಿಸಿರುತ್ತದೆ ಎಂದು ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ತಿಳಿಸಿದ್ದಾರೆ.ಸಂಘದ ಈ ಸಾಧನೆಗೆ ಸಹಕರಿಸಿದ ಆಡಳಿತ ಮಂಡಳಿ ನಿರ್ದೇಶಕರಿಗೆ, ಸಿಬ್ಬಂದಿಗೆ ಹಾಗೂ ಎಲ್ಲಾ ವರ್ಗದ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿರುವ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಅವರು ಮಾಹಿತಿ ನೀಡಿದರು.೨೦೨೫-೨೬ ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಮತ್ತು ಮಂಗಳೂರಿನಲ್ಲಿ ಹೊಸ ಶಾಖೆ ತೆರೆಯುವ ಯೋಜನೆ ರೂಪಿಸಲಾಗಿದೆ. ಸಂಘದಲ್ಲಿ ಒಟ್ಟು ೬೪ ಸಿಬ್ಬಂದಿ ಮತ್ತು ೧೭ ನಿತ್ಯ ನಿಧಿ ಸಂಗ್ರಾಹಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಂಘದ ಪ್ರಗತಿ ಮತ್ತು ಸೇವೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ನಡೆದ ೬೪ ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ‘ಅತ್ಯುತ್ತಮ ಸಹಕಾರ ಸಂಘ’ ಎಂದು ಪ್ರಶಸ್ತಿ ಪತ್ರ ಮತ್ತು ೨೦೨೩-೨೪ನೇ ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆಯ ಸಂದರ್ಭದಲ್ಲಿ ಸಂಘಕ್ಕೆ ‘ಉತ್ತಮ ಸಹಕಾರಿ ಸಂಘ’ ಪ್ರಶಸ್ತಿ ಗಳಿಸಿರುತ್ತದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇವರಿಂದ ೫ ಬಾರಿ ‘ಸಾಧನಾ ಪ್ರಶಸ್ತಿ’ ಪಡೆದುಕೊಂಡಿದೆ ಎಂದು ಮಾಹಿತಿ ನೀಡಿದರು.
ಸದಸ್ಯರಿಗೆ ಸೋಲಾರ್ ವಾಟರ್ ಹೀಟರ್ ಮತ್ತು ಸೋಲಾರ್ ಲೈಟ್ ಅಳವಡಿಸಳು ಶೂನ್ಯ ಬಡ್ಡಿದರದಲ್ಲಿ ರು.೨ ಲಕ್ಷ ಸಾಲ ವಿತರಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.