ಮುಂಡರಗಿ: 2089 ವಿದ್ಯಾರ್ಥಿಗಳು ಹಾಜರ್

KannadaprabhaNewsNetwork |  
Published : Mar 19, 2026, 02:15 AM IST
ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ, ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಕರಬಸಪ್ಪ ಹಂಚಿನಾಳ ಅವರು ಹೂವು ನೀಡಿ ಪರೀಕ್ಷಾ ಕೇಂದ್ರಕ್ಕೆ ಸ್ವಾಗತಿಸಿದರು. | Kannada Prabha

ಸಾರಾಂಶ

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪದವಿಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಕರಬಸಪ್ಪ ಹಂಚಿನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ ಮಕ್ಕಳಿಗೆ ಹೂವು ಕೊಟ್ಟು ಪರೀಕ್ಷಾ ಕೇಂದ್ರಕ್ಕೆ ಸ್ವಾಗತಿಸಿದರು.

ಮುಂಡರಗಿ: ತಾಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಿವೆ. ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆಗೆ 2182 ವಿದ್ಯಾರ್ಥಿಗಳಲ್ಲಿ 93 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 2089 ವಿದ್ಯಾರ್ಥಿಗಳು ಹಾಜರಾಗಿದ್ದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪದವಿಪೂರ್ವ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಕಾಲೇಜು ಮೇಲ್ವಿಚಾರಣಾ ಸಮಿತಿ ಕಾರ್ಯಾಧ್ಯಕ್ಷ ಕರಬಸಪ್ಪ ಹಂಚಿನಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣೀಗೇರಿ ಮಕ್ಕಳಿಗೆ ಹೂವು ಕೊಟ್ಟು ಪರೀಕ್ಷಾ ಕೇಂದ್ರಕ್ಕೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ, ಎಂ.ಎಸ್. ಶಿವಶೆಟ್ಟಿ, ಎಸ್.ಸಿ. ಚಕ್ಕಡಿಮಠ, ತಾಲೂಕು ನೌಕರರ ಸಂಘದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ, ಮನೋಹರ, ಮುಖ್ಯ ಅಧೀಕ್ಷಕಿ ದಂಡಿನ, ಕಷ್ಟೋಡಿಯನ್ ಎಂ.ವಿ. ಕೋರಿ, ಶ್ರೀಕಾಂತ ಅರಹುಣಸಿ, ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ತಾಲೂಕಿನ 8 ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ಮಕ್ಕಳಿಗೆ ಅಲ್ಲಿನ ಶಿಕ್ಷಕರು ಹಾಗೂ ಇಲಾಖೆ ಹಿರಿಯ ಅಧಿಕಾರಿಗಳು ಮಕ್ಕಳಿಗೆ ಹೂವು ನೀಡಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡರು. ಪರೀಕ್ಷೆ ಜರುಗುವ ಎಲ್ಲ 8 ಕೇಂದ್ರಗಳಲ್ಲಿಯೂ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಪ್ರತಿ ಕೇಂದ್ರಗಳಲ್ಲಿಯೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣೀಗೇರಿ ತಿಳಿಸಿದ್ದಾರೆ.ಪರೀಕ್ಷೆ ಬರೆದ 1530 ವಿದ್ಯಾರ್ಥಿಗಳು

ನರಗುಂದ: ಬುಧವಾರದಿಂದ ಪ್ರಾರಂಭಗೊಂಡ 2025- 26ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ತಾಲೂಕಿನ ಒಟ್ಟು 5 ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.1536 ವಿದ್ಯಾರ್ಥಿಗಳ ಹಾಜರಾತಿ ಇದ್ದು, ಈ ಪೈಕಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಒಟ್ಟು 6 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. 13 ವಿಶೇಷ ಮಕ್ಕಳು ಪರೀಕ್ಷೆ ಬರೆದಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಕಂಬಳಿ ತಿಳಿಸಿದ್ದಾರೆ.ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ, ಸರ್ಕಾರಿ ಪಿಯು ಕಾಲೇಜು, ನವೋದಯ ಶಾಲೆ, ಕೊಣ್ಣೂರು ಕೆಇಎಸ್ ಶಾಲೆ ಒಟ್ಟು 5 ಕೇಂದ್ರಗಳಲ್ಲಿ 1530 ವಿದ್ಯಾರ್ಥಿಗಳು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಎಂ.ಎಚ್. ಅಲಕನೂರ, ಶಿವಕುಮಾರ ಕೆ.ಬಿ., ಐ.ಎಂ. ಹುರಕಡ್ಲಿ, ಪಿ.ಸಿ. ಕಲಹಾಳ, ಗಂಗಾಧರ ಬಿ. ಅವರು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್ಲೆಲ್ಲೂ ಯುಗಾದಿಯ ಸಂಭ್ರಮ: ಆದರೆ ಕೂಡ್ಲಿಗಿಯಲ್ಲಿ ಸೂತಕದ ಛಾಯೆ!
ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್