ಕನ್ನಡಪ್ರಭ ವಾರ್ತೆ ಕಾರ್ಕಳ
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗೀಶ್ ಇನ್ನಾ, ಪ್ರಮುಖರಾದ ಸಂತೋಷ್ ದೇವಾಡಿಗ, ಕಿಶೋರ್ ಬೋಳ, ಯೋಗೀಶ್ ಮೂಲ್ಯ, ಉದ್ಯಮಿಗಳಾದ ರಿತೇಶ್ ಹಾಗೂ ಉದಯ್ ಶೆಟ್ಟಿ ಅಭಿಮಾನಿ ಬಳಗದ ಪದಾಧಿಕಾರಿಗಳು ವಿಜೇತ ಶಾಲಾ ಮಕ್ಕಳಿಗೆ ವಿಶೇಷ ಭೋಜನವನ್ನು ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್ ವಕ್ತಾರರು ಪ್ರದೀಪ್ ಬೇಲಾಡಿ, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದರ್ಶನ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ್ ಉಪಸ್ಥಿತರಿದ್ದರು.ತನ್ನ ಸಂಸ್ಥೆಗೆ ಸದಾ ಸಹಕಾರ ನೀಡುತ್ತಿರುವ ಉದಯಕುಮಾರ್ ಶೆಟ್ಟಿ ಅವರಿಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲೆಂದು ವಿಜೇತ ಶಾಲಾ ಶಿಕ್ಷಕಿಯರು ಮತ್ತು ಮಕ್ಕಳು ಆರತಿ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು