ಕಸ ವೀಲೇವಾರಿ ಘಟಕಕ್ಕೆ ಪುರಸಭಾ ಅಧ್ಯಕ್ಷ ಭೇಟಿ

KannadaprabhaNewsNetwork |  
Published : Mar 22, 2026, 01:30 AM IST
21ಎಚ್ಎಸ್ಎನ್11  :ಪ್ರಸಾದಿಹಳ್ಳಿ ರಸ್ತೆಯ ಕಸ ವಿಲೇವಾರಿ ಘಟಕಕ್ಕೆ ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಭೇಟಿ  ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಘಟಕದಲ್ಲಿ ಒಟ್ಟು 8 ಮಂದಿ ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದೇ ಇರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ ಎಂಬುದು ಗಮನಕ್ಕೆ ಬಂದಿದೆ. ವಿಶೇಷವಾಗಿ ಗಾಜಿನ ತುಂಡುಗಳು, ಮಕ್ಕಳ ವ್ಯಾಂಪರ್ಸ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಕಸದಲ್ಲಿ ಸೇರಿಸಲಾಗುತ್ತಿದ್ದು, ಕಾರ್ಮಿಕರು ಕೈಗವಸುಗಳಿಲ್ಲದೆ ಅವುಗಳನ್ನು ವಿಂಗಡಿಸುವಾಗ ಗಾಯಗೊಳ್ಳುವ ಘಟನೆಗಳು ನಡೆದಿರುವುದಾಗಿ ತಿಳಿದುಬಂದಿದೆ.

ಬೇಲೂರು: ಪ್ರಸಾದಿಹಳ್ಳಿ ರಸ್ತೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ವೇಳೆ ಘಟಕದಲ್ಲಿ ಬಳಸಲಾಗುತ್ತಿರುವ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆಯೇ, ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತಿದೆಯೇ, ಗೊಬ್ಬರ ತಯಾರಿಕಾ ಪ್ರಕ್ರಿಯೆ ನಡೆಯುತ್ತಿದೆಯೇ ಎಂಬುದನ್ನು ಅವರು ಪರಿಶೀಲಿಸಿದರು. ಘಟಕದಲ್ಲಿ ಒಟ್ಟು 8 ಮಂದಿ ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡದೇ ಇರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ ಎಂಬುದು ಗಮನಕ್ಕೆ ಬಂದಿದೆ. ವಿಶೇಷವಾಗಿ ಗಾಜಿನ ತುಂಡುಗಳು, ಮಕ್ಕಳ ವ್ಯಾಂಪರ್ಸ್ ಸೇರಿದಂತೆ ಅಪಾಯಕಾರಿ ವಸ್ತುಗಳನ್ನು ಕಸದಲ್ಲಿ ಸೇರಿಸಲಾಗುತ್ತಿದ್ದು, ಕಾರ್ಮಿಕರು ಕೈಗವಸುಗಳಿಲ್ಲದೆ ಅವುಗಳನ್ನು ವಿಂಗಡಿಸುವಾಗ ಗಾಯಗೊಳ್ಳುವ ಘಟನೆಗಳು ನಡೆದಿರುವುದಾಗಿ ತಿಳಿದುಬಂದಿದೆ.ಈ ನಿರ್ಲಕ್ಷ್ಯದಿಂದ ಪೌರ ಕಾರ್ಮಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷೆ ಉಷಾ ಸತೀಶ್, ಸಾರ್ವಜನಿಕರು ಕಸದ ವಿಲೇವಾರಿಯಲ್ಲಿ ಜಾಗೃತಿ ವಹಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾಂವಿ, ಆರೋಗ್ಯ ಅಧಿಕಾರಿ ಲೋಹಿತ್ ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೋಕಕಲ್ಯಾಣಕ್ಕಾಗಿ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ
ಜೀವನದ ಉನ್ನತಿಗೆ ಧರ್ಮ ಪಾಲನೆ ಮುಖ್ಯ: ರಂಭಾಪುರಿ ಶ್ರೀ