ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಅನುಷ್ಠಾನಕ್ಕೆ ನಗರ ಪಾಲಿಕೆ ಒತ್ತು

KannadaprabhaNewsNetwork |  
Published : Aug 05, 2025, 12:30 AM IST
28 | Kannada Prabha

ಸಾರಾಂಶ

ಜೈವಿಕ- ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು, ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು

ಕನ್ನಡಪ್ರಭ ವಾರ್ತೆ ಮೈಸೂರುಪರಿಸರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ನಗರ ಪಾಲಿಕೆಯ ಆಯುಕ್ತರು ಸೋಮವಾರ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಮತ್ತು ಪ್ರಯೋಗಾಲಯಗಳ ಪ್ರತಿನಿಧಿಗಳೊಂದಿಗೆ ವಲಯ ಕಚೇರಿ -3 ರ ಸಭಾಂಗಣದಲ್ಲಿ ಸಭೆ ನಡೆಸಿದರು.ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳು, 2016 (ಬಿಎಂಡಬ್ಲ್ಯೂ ನಿಯಮಗಳು 2016) ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸುವುದು ಸಭೆಯ ಉದ್ದೇಶವಾಗಿತ್ತು.ಸಭೆಯಲ್ಲಿ ಸ್ವಚ್ಛತಾ ಕಾರ್ಮಿಕರು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುವ ಜೈವಿಕ-ವೈದ್ಯಕೀಯ ತ್ಯಾಜ್ಯವನ್ನು ಪ್ರತಿನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯದೊಂದಿಗೆ ಮಿಶ್ರಣ ಮಾಡುತ್ತಿರುವ ನಿರಂತರ ಅಭ್ಯಾಸದ ಬಗ್ಗೆ ಆಯುಕ್ತರು ಕಳವಳ ವ್ಯಕ್ತಪಡಿಸಿದರು.ಜೈವಿಕ- ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು, ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದರು.ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಸೆ. 1 ರವರೆಗೆ ಗಡುವು ನಿಗಧಿಪಡಿಸಿದರು. ಈ ನಿಗದಿತ ದಿನಾಂಕದ ನಂತರ ಮಾನದಂಡಗಳನ್ನು ಪಾಲಿಸಲು ವಿಫಲವಾದರೆ ಕಾನೂನಿನ ನಿಬಂಧನೆಗಳ ಪ್ರಕಾರ ಕಠಿಣ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದರು.ಮೈಸೂರು ಸ್ವಚ್ಛ ಮತ್ತು ಸುರಕ್ಷಿತ ನಗರವಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಎಂಸಿಸಿ ಬದ್ಧವಾಗಿದೆ ಮತ್ತು ಈ ಗುರಿಯನ್ನು ಸಾಧಿಸಲು ಎಲ್ಲಾ ಪಾಲುದಾರರ ಸಹಕಾರ ಅವಶ್ಯ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ, ಇತರೆ ವೈದ್ಯಕೀಯ ಸಿಬ್ಬಂದಿ ಮತ್ತು ಸಂಸ್ಥೆಯವರು ಹಾಗೂ ನಗರ ಪಾಲಿಕೆ ಅಧಿಕಾರಿ ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ