ಚನ್ನಪಟ್ಟಣ: ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಮ್ಮ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಪತ್ರಿಕೆಯೊಂದಿಗೆ ಈ ವಿಚಾರ ಹಂಚಿಕೊಂಡಿರುವ ಪ್ರಶಾಂತ್, ನಗರಸಭೆಯ ಅಧ್ಯಕ್ಷನಾಗಿದ್ದರೂ ಸಹ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ಅಸಹಾಯಕನಾಗಿದ್ದೇನೆ. ಜನರ ಹಕ್ಕು ಮತ್ತು ನ್ಯಾಯವನ್ನು ರಕ್ಷಿಸುವಲ್ಲಿ ವಿಫಲನಾಗಿದ್ದೇನೆ. ನಗರಸಭೆ ಅಧ್ಯಕ್ಷನಾದ ನನ್ನ ಮಾತಿಗೆ ಇಲ್ಲಿ ಬೆಲೆ ಸಿಗುತ್ತಿಲ್ಲ ಎಂದ ಮೇಲೆ ಇನ್ಯಾಕೆ ಈ ಹುದ್ದೆಯಲ್ಲಿ ಮುಂದುವರಿಯಬೇಕು ಎಂದು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಮತ್ತು 26ನೇ ವಾರ್ಡ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಚನ್ನಪಟ್ಟಣ ನಗರಸಭೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಈ ಕುರಿತು ಹಲವಾರು ಬಾರಿ ಜಿಲ್ಲಾಧಿಕಾರಿಗೆ ಕಚೇರಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಜನೋಪಯೋಗಿ ಕೆಲಸ ಮಾಡಲು ಆಗದ ಮೇಲೆ ಅಧಿಕಾರ ಇದ್ದರೆ ಏನು ಇಲ್ಲದಿದ್ದರೆ ಏನು ಎಂದು ನೋವಿನಲ್ಲೇ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದೇನೆ ಎಂದು ತಿಳಿಸಿದ್ದಾರೆ.ಬಣ ರಾಜಕಾರಣವೂ ಕಾರಣ?:
ನಗರಸಭೆ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಹಿತೈಷಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕವೇ ಈ ನಿರ್ಧಾರ ಕೈಗೊಂಡಿದ್ದೇನೆ. ಬುಧವಾರ ರಾಜೀನಾಮೆ ಸಲ್ಲಿಸಲಿದ್ದೇನೆ.
ಪಿ.ಪ್ರಶಾಂತ್