ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮುಂದಾದ ನಗರಸಭೆ

KannadaprabhaNewsNetwork |  
Published : Dec 19, 2025, 02:30 AM IST
ಪೋಟೋಇದೆ. | Kannada Prabha

ಸಾರಾಂಶ

ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಹೆಚ್ಚಿದ್ದ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಸ್ಥಳೀಯ ನಗರಸಭೆ ಅಂತೂ ಮುಂದಾಗಿರುವುದು ಸಾರ್ವಜನಿಕರಲ್ಲಿ ಸಮಾಧಾನ ತರಿಸಿದೆ.

ಹಾವೇರಿ: ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಹೆಚ್ಚಿದ್ದ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಸ್ಥಳೀಯ ನಗರಸಭೆ ಅಂತೂ ಮುಂದಾಗಿರುವುದು ಸಾರ್ವಜನಿಕರಲ್ಲಿ ಸಮಾಧಾನ ತರಿಸಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ನಗರಸಭೆ ಬೀದಿ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಶಿಬಿರ ನಡೆಸಲು ಮುಂದಾಗಿದ್ದು, ಡಿ. 19ರಂದು ಈ ಕಾರ್ಯಕ್ಕೆ ಚಾಲನೆ ನೀಡುತ್ತಿದೆ.

ನಗರದ ಹಲವು ಕಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಗಲು, ರಾತ್ರಿ ಎನ್ನದೆ ಬೀದಿ ನಾಯಿಗಳು ನೀಡುತ್ತಿರುವ ಕಾಟದಿಂದ ವಾಹನ ಸವಾರರು, ಪಾದಚಾರಿಗಳು ದಿನನಿತ್ಯ ತೊಂದರೆ ಅನುಭವಿಸುತ್ತಿದ್ದು, ಇದರಿಂದ ಯಾವಾಗ ಮುಕ್ತಿ ಸಿಗಲಿದೆ ಎಂಬ ಭಾವನೆ ಜನರಲ್ಲಿತ್ತು. ಜನದಟ್ಟಣೆ ಹಾಗೂ ವಾಹನ ದಟ್ಟಣೆ ಹೆಚ್ಚಾಗಿರುವ ಸ್ಥಳಗಳಲ್ಲಿ ದಿನದಿಂದ ದಿನಕ್ಕೆ ನಾಯಿಗಳ ದಂಡು ಹೆಚ್ಚುತ್ತಲೇ ಇತ್ತು. ಹಾಗಾಗಿ ಬೀದಿನಾಯಿಗಳ ನಿಯಂತ್ರಣದ ಬಗ್ಗೆ ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ನಗರದ ಸಾರ್ವಜನಿಕರು ಆಗ್ರಹಿಸಿದ್ದರು.

ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದನ್ವಯ ನಗರಸಭೆಯಿಂದ ಮೊದಲ ಬಾರಿಗೆ ಬೀದಿನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ಪಶು ಇಲಾಖೆಯ ವೈದ್ಯಾಧಿಕಾರಿಗಳಿಂದ ಮಾಡಿಸಿ ಆ ಬೀದಿನಾಯಿಗಳನ್ನು ಶಸ್ತ್ರಚಿಕಿತ್ಸೆ ನಂತರ 3 ದಿನಗಳ ಕಾಲ ಶುಶ್ರೂಷೆ ಮಾಡಿ ನಂತರ ಹಿಡಿದ ಜಾಗೆಯಲ್ಲಿ ಬಿಡಲಾಗುವುದು, ಎಬಿಸಿ ನಿಯಮ ಅನುಷ್ಠಾನಗೊಳಿಸಲು ಕಡ್ಡಾಯವಾಗಿ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕಿರ್ಣ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ನಾಯಿಗಳಿಗೆ ಹಾಗೂ ಆಕ್ರಮಣಕಾರಿ ನಾಯಿಗಳನ್ನು, ಹುಚ್ಚು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ರೇಬಿಸ್ ಲಸಿಕೆ ಹಾಕಿಸಿ ಕಾಯಂ ವಾಸವಿರಲು ಆಶ್ರಯತಾಣಗಳನ್ನು ನಿರ್ಮಾಣ ಮಾಡುವುದು, ಬೀದಿನಾಯಿಗಳನ್ನು ಆಶ್ರಯ ತಾಣಗಳಲ್ಲಿ ನಾಯಿಗಳನ್ನು ಸಂವೇದನೆಯಿಂದ ನೋಡಿಕೊಳ್ಳಲು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು, ಬೀದಿ ನಾಯಿಗಳಿಗೆ ಶಸ್ತçಚಿಕಿತ್ಸಾ ಸಮಯದಲ್ಲಿ ರೇಬಿಸ್ ವ್ಯಾಕ್ಸಿನ್ ಹಾಕಿಸುವುದು, ನಗರಸಭೆ ಪ್ರದೇಶಗಳ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣ ಬಸ್ ನಿಲ್ದಾಣಗಳು, ರೇಲ್ವೆ ನಿಲ್ದಾಣಗಳ ಮುಖ್ಯಸ್ಥರಿಗೆ ಬೀದಿನಾಯಿಗಳ ಸಂಖ್ಯೆಯನ್ನು ತಿಳಿಸಲು ನೋಟಿಲ್ ನೀಡಲು ನಗರಸಭೆ ಮುಂದಾಗಿದೆ.

ನಗರಸಭೆಯಿಂದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದನ್ವಯ ಇದೇ ಪ್ರಥಮ ಬಾರಿಗೆ ಗುತ್ತಲ ರಸ್ತೆಯ ಎಪಿಎಂಸಿ ಆವರಣದಲ್ಲಿ ಡಿ. 19ರಂದು ಬೆಳಗ್ಗೆ 10ಗಂಟೆಗೆ ನಗರಸಭೆ ಆಳಿತಾಧಿಕಾರಿಗಳಿಗೂ ಆಗಿರುವ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಘಟಕ, ಆಶ್ರಯ ತಾಣಗಳ ಉದ್ಘಾಟನೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಎಚ್.ಕಾಂತರಾಜು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು