ರೇಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸ ಪ್ರಸಾದ್ ಹೆಸರಿಡುವಂತೆ ಒತ್ತಾಯ

KannadaprabhaNewsNetwork |  
Published : Jul 13, 2025, 01:18 AM IST
62 | Kannada Prabha

ಸಾರಾಂಶ

ಶಾಸಕರಾಗಿದ್ದ ವಿ. ಶ್ರೀನಿವಾಸ ಪ್ರಸಾದ್ ನಂಜನಗೂಡಿನ ಅಭಿವೃದ್ಧಿಗೆ ಹೆಚ್ಚಿನ ನೆರವು

ಕನ್ನಡಪ್ರಭ ವಾರ್ತೆ ನಂಜನಗೂಡು

ಪಟ್ಟಣದ ಮೈಸೂರು ಮುಖ್ಯರಸ್ತೆಯಲ್ಲಿ ಬರುವ ಅಪೊಲೋ ವೃತ್ತದ ಬಳಿ ಇರುವ ರೇಲ್ವೆ ಮೇಲ್ಸೇತುವೆಗೆ ಮಾಜಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೆಸರಿಡುವಂತೆ ಒತ್ತಾಯಿಸಿ ಶ್ರೀನಿವಾಸ ಪ್ರಸಾದ್ ಅಭಿಮಾನಿಗಳು ಶುಕ್ರವಾರ ನಗರಸಭೆಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು.

ನಗರಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತ ವಿಜಯ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಹಲವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ವಿಶೇಷವಾಗಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ನಂಜನಗೂಡು ಶಾಸಕರಾಗಿದ್ದ ವಿ. ಶ್ರೀನಿವಾಸ ಪ್ರಸಾದ್ ನಂಜನಗೂಡಿನ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡಿದ್ದಾರೆ. ಅದರಲ್ಲೂ ವಿಶೇಷವಾಗಿ ಚಾಮರಾಜನಗರ ರಸ್ತೆಯಿಂದ ಮೈಸೂರು ರಸ್ತೆಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಅಡ್ಡಲಾಗಿದ್ದ ರೈಲ್ವೆಗೇಟ್ ನಿಂದ ಉಂಟಾಗುತ್ತಿದ್ದ ವಾಹನ ದಟ್ಟಣೆಯನ್ನು ತಡೆಗಟ್ಟಲು ರೈಲ್ವೆ ಮೇಲ್ಸೇತುವೆ ನಿರ್ಮಿಸಲು ನೆರವಾಗಿದ್ದರು, ಹೀಗಾಗಿ ಅವರ ಹೆಸರನ್ನೇ ಇಡುವಂತೆ ಈ ಹಿಂದಿನಿಂದಲೂ ಒತ್ತಡ ಹೇರಲಾಗುತ್ತಿದೆ, ಆದರೆ ಕಳೆದ ಅ. 15ರಂದು ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರನ್ನು ಮೇಲ್ಸೇತುವೆಗೆ ಇಡಲು ತೀರ್ಮಾನಿಸಲಾಗಿದೆ, ಈ ತೀರ್ಮಾನಕ್ಕೆ ನಮ್ಮೆಲ್ಲರ ಆಕ್ಷೇಪಣೆಯಿದ್ದು, ಸಾರ್ವಜನಿಕರ ಅಪೇಕ್ಷೆಯಂತೆ ಮಾಜಿ ಸಂಸದ ವಿ. ಶ್ರೀನಿವಾಸಪ್ರಸಾದ್ ಹೆಸರನ್ನು ಇಡಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಮಾತನಾಡಿ, ರೇಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಯಾರು ಕಾರಣೀ ಭೂತರಾಗಿದ್ದಾರೆ ಎಂಬ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಅವರ ಹೆಸರನ್ನು ಇಡಲು ಶಿಫಾರಸ್ಸು ಮಾಡಲಾಗುವುದು ಎಂದರು.

ಬಿಜೆಪಿ ನಗರಾಧ್ಯಕ್ಷ ಸಿದ್ದರಾಜು, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ ಸೇರಿದಂತೆ ಇದ್ದರು.

-------------

PREV

Latest Stories

ನಗರದಲ್ಲಿ ಶೀಘ್ರ ಟೋಯಿಂಗ್ ವ್ಯವಸ್ಥೆ ಮರು ಜಾರಿ:ಪರಂ
ದೇಶದಲ್ಲೇ ಫಸ್ಟ್‌ ಟೈಂ ಜನರ ಮನೆ ಬಾಗಿಲಿಗೆ ಪೊಲೀಸ್ : ಪರಂ
ನೀರುಗಾಲುವೆಗಳಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣದಿಂದ ಪ್ರವಾಹ